Wednesday, January 22, 2025

ಶಾಲೆ ಆರಂಭಕ್ಕೆ ಸಚಿವ ಬಿ.ಸಿ ನಾಗೇಶ್​​ ಗ್ರೀನ್​​ ಸಿಗ್ನಲ್..?​​

ಬೆಂಗಳೂರು: ಕೊರೋನಾ ಮೂರನೇ ಅಲೆ ಹಿನ್ನೆಲೆ ಬಂದ್​ ಆಗಿದ್ದ ಶಾಲೆಗಳು ಪುನಾರಂಭದ ಬಗ್ಗೆ ಸಚಿವ ಬಿ.ಸಿ ನಾಗೇಶ್ ಮಾತನಾಡಿದ್ದಾರೆ.

ಕೊರೋನಾ ಮೂರನೇ ಅಲೆ ಹಿನ್ನೆಲೆ ರಾಜ್ಯದಲ್ಲಿ ಶಾಲೆಗಳನ್ನು ಬಂದ್​ ಮಾಡಲು ಸರ್ಕಾರ ಚಿಂತನೆ ನಡೆಸಿ ಕೋವಿಡ್​ನಿಂದ ಮಕ್ಕಳನ್ನು ರಕ್ಷಣೆ ಮಾಡಲು 1 ರಿಂದ 9ನೇ ತರಗತಿವರೆಗಿನ ಶಾಲೆಗಳನ್ನು ಬಂದ್ ಮಾಡಲಾಗಿತ್ತು.

ಇಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಮಾಧ್ಯಮದೊಂದಿಗೆ ಮಾತನಾಡಿ ಕೊರೋನಾ ಮೂರನೇ ಅಲೆ ಹಿನ್ನೆಲೆ ಬಂದ್​ ಆಗಿದ್ದ 1 ರಿಂದ 9ನೇ ತರಗತಿವರೆಗಿನ ಶಾಲೆಗಳನ್ನು ಮತ್ತೆ ಸೋಮವಾರದಿಂದ ರಾಜ್ಯದಲ್ಲಿ ಪುನಾರಂಭವಾಗಲಿವೆ. ಸಂಪೂರ್ಣ ಪ್ರಮಾಣದಲ್ಲಿ 1-9 ನೇ ತರಗತಿ ಶಾಲೆಗಳು ಆರಂಭವಾಗಲಿವೆ ಎಂದಿದ್ದಾರೆ.

ಈಗಾಗಲೇ ತಾಂತ್ರಿಕ ಸಲಹಾ ಸಮಿತಿಯ ಜೊತೆ ಮಾತುಕತೆ ನಡೆಸಿದ್ದೇವೆ ಎಂದು ಸಚಿವ ಬಿ.ಸಿ ನಾಗೇಶ್ ತಿಳಿಸಿದರು. ಮತ್ತು ನಾಳೆಯ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಯಾವುದೇ ಭಯಪಡದೇ ಶಾಲೆಗೆ ಮಕ್ಕಳನ್ನ ಕಳಿಸಬಹುದು ಎಂದು ಪೋಷಕರಿಗೆ ತಿಳಿಸಿದ್ದಾರೆ.

ನಮಗೆ ಕರೋನಾದ ಎರಡು ಅಲೆಯನ್ನ ಎದುರಿಸಿ ಅನುಭವ ಇದೆ.ಯಾರೂ ಭಯಪಡುವ ಅವಶ್ಯಕತೆ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಹೇಳಿಕೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES