ಬೆಂಗಳೂರು: ಯಾವುದೇ ಕಾರಣಕ್ಕೂ ರಾಷ್ಟ್ರೀಯ ಪಕ್ಷಗಳ ಮನೆ ಬಾಗಿಲಿಗೆ ಹೋಗಲು ಸಿದ್ಧವಿಲ್ಲ. ಈಗಲೂ ಹೋಗಿಲ್ಲ, ಮುಂದೆಯೂ ಹೋಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ನಗದರ ಜೆಡಿಎಸ್ ಕಚೇರಿ ಜೆ.ಪಿ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅತಂತ್ರ ಸ್ಥಿತಿ ಬಂದಾಗಲೂ ನಾವು ಯಾರ ಮನೆ ಬಾಗಿಲಿಗೂ ಹೋಗಿಲ್ಲ. 123 ಸ್ಥಾನ ಗೆಲ್ಲಲು ನಾನು ಸಂಘಟನೆ ಹಾಗೂ ಶ್ರಮ ವಹಿಸುತ್ತಿದ್ದೇವೆ ಎಂದರು.
ಸಿಎಂ ಹೇಳಿಕೆ ನೋಡಿದೆ. ಜೆಡಿಎಸ್ ಅತಂತ್ರ ಆದಾಗ ಸ್ವತಂತ್ರರಾಗ್ತಾರೆ ಅಂದಿದ್ದಾರೆ. ನಾವೆಂದೂ ಅತಂತ್ರರಾಗಿಲ್ಲ, ಅವರಿಗೆ ಅತಂತ್ರರಾದಾಗ ಜೆಡಿಎಸ್ ಬಾಗಿಲು ಬಡಿದಿದ್ದಾರೆ. ಬಿಜೆಪಿ ನಾಯಕರಲ್ಲೇ ಕಡಿವಾಣ ಹಾಕುವ ಸ್ಥಿತಿ ಇಲ್ಲ, ಗೊಂದಲ ಸೃಷ್ಟಿ ಮಾಡುವುದಕ್ಕೆ ನಾವು ಅವಕಾಶ ಕೊಟ್ಟಿಲ್ಲ. ಅವರನ್ನೇ ಹದ್ದು ಬಸ್ತಲ್ಲಿ ಇಟ್ಟುಕೊಳ್ಳಲಿಕ್ಕೆ ಆಗಿಲ್ಲ, ಅವರ ಪಕ್ಷದ ಉಳಿವಿಗಾಗಿ ಏನು ಮಾಡ್ತಾ ಇದ್ದಾರೋ ಹಾಗೇ ನಾವು ಮಾಡ್ತಾ ಇದ್ದೀವಿ ಎಂದು ಸಿಎಂ ಬೊಮ್ಮಾಯಿ ಹೇಳಿಕೆ ಪ್ರತಿಕ್ರಿಯೆ ನೀಡಿದ್ದಾರೆ.
ಇನ್ನು ನಿನ್ನೆ ನಮ್ಮ ಪಕ್ಷದ ಸಂಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದೆ. ಕೆಲವು ಮಾಧ್ಯಮದಲ್ಲಿ ತಪ್ಪು ಗ್ರಹಿಕೆ ಹೋಗಿದೆ. 2023ಕ್ಕೆ ಕಾರ್ಯಕರ್ತರ ಶ್ರಮದಿಂದ ನಮ್ಮ ಶ್ರಮ ಸಾಬೀತು ಮಾಡ್ತೀವಿ. ಇಲ್ಲಿ ಜೆಡಿಎಸ್ಗೆ ಶಕ್ತಿ ಏನು? ಜೆಡಿಎಸ್ ಬಿಟ್ಟು ಏನು ಮಾಡಲು ಆಗಲ್ಲ ಅನ್ನೋದು ಹೇಳಿದ್ದೆ. ಅದಕ್ಕೆ ಸ್ಪಷ್ಟೀಕರಣ ಕೊಡ್ತೀನಿ. ಕೊರೊನಾ ಇರೋದ್ರಿಂದ ಪಕ್ಷ ಸಂಘಟನೆ ಆಗಿರಲಿಲ್ಲ. ನಮ್ಮ ಸಂಘಟನೆಯಿಂದ ಜನರಿಗೆ ತೊಂದರೆ ಆಗಬಾರದು ಎಂದು ಸಂಘಟನೆಗೆ ಹೊತ್ತು ಕೊಟ್ಟಿಲ್ಲ ಆದರೆ ಆಂತರಿಕವಾಗಿ ಸಂಘಟನೆ ಮಾಡಲು ಆಗಿಲ್ಲ ಎಂದರು.
ಸದ್ಯ ಜನತಾ ಪರಿವಾರದ ನಾಯಕರು ಸೆಟ್ಟಲ್ ಆಗಿದ್ದಾರೆ. ಅವರನ್ನು ವಾಪಸ್ ತರುವ ನಿರೀಕ್ಷೆ ಇಟ್ಟುಕೊಂಡಿಲ್ಲ. ಯುವ ನಾಯಕತ್ವ ತರುವ ನಿಟ್ಟಿನಲ್ಲಿ ಚಿಂತಿಸಲಾಗುತ್ತಿದೆ. ಹೊಸ ನಾಯಕರ ನೇಮಕಾತಿ ಮಾಡಲಾಗುತ್ತಿದೆ. ಹೊಸ ನಾಯಕರ ಸೃಷ್ಟಿ ಮೊದಲಿನಿಂದಲೂ ನಮಗೆ ಗುರು ಮನೆ ಇದ್ದಂತೆ. ಹಲವಾರು ಜನ ನಾಯಕರಾಗಿ ಬೆಳೆದು ಹೋಗಿದ್ದಾರೆ ಎಂದು ಹೆಚ್.ಡಿ ಕುಮಾರಸ್ವಾಮಿ ಅವರು ಮಾತನಾಡಿದರು.