Monday, December 23, 2024

‘ಸಿದ್ದರಾಮಯ್ಯ ಅಲ್ಲ ವಲಸೆರಾಮಯ್ಯ’

ಬೆಂಗಳೂರು : ವಲಸೆರಾಮಯ್ಯ ಸಿದ್ದರಾಮಯ್ಯನವರೇ ಈ ಬಾರಿ ನಿಮ್ಮದು ಕ್ಷೇತ್ರಾಂತರವೋ? ಈ ರೀತಿ ಟ್ವೀಟ್ ಮಾಡಿ ರಾಜ್ಯ ಬಿಜೆಪಿ ಘಟಕ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನ ಕೆಣಕಿದೆ.

ಸಿದ್ದರಾಮಯ್ಯನವರೇ ಈ ಬಾರಿ ನಿಮ್ಮದು ಕ್ಷೇತ್ರಾಂತರವೋ? ಪಕ್ಷಾಂತರವೋ? ನಿಮ್ಮ ಆಪ್ತ ವಲಯದಲ್ಲಿರುವ ಕೆಲವರು ಈಗ ಸಮಾಜವಾದಿ ಪಕ್ಷ ಹಾಗೂ ಆಮ್ ಆದ್ಮಿ ಪಕ್ಷದ ನಾಯಕರ ಸುತ್ತಮುತ್ತ ಕಾಣಿಸಿಕೊಳ್ಳುತ್ತಿರುವುದು ಈ ಅನುಮಾನಕ್ಕೆ ಪುಷ್ಠಿ ನೀಡುತ್ತಿದೆ ವಲಸೆರಾಮಯ್ಯ ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ತಮಗೆ ಐದಾರು ಕ್ಷೇತ್ರದಿಂದ ಆಹ್ವಾನವಿದೆ ಎಂದು ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇಪದೆ ಹೇಳುತ್ತಾ ಬಂದಿದ್ದಾರೆ. ಇದಕ್ಕೆ ಟ್ವೀಟ್ ಮೂಲಕ ಕರ್ನಾಟಕ ಬಿಜೆಪಿ ಘಟಕ ವ್ಯಂಗ್ಯವಾಡಿದೆ. ಸುಳ್ಳು ಹೇಳುವುದರಲ್ಲಿ ಸದಾ ‘ಸಿದ್ದ’ರಾಮಯ್ಯ ಆಗಿರುವವರ ಸುಳ್ಳಿನ ಕೊಡ ಇನ್ನೇನು ತುಂಬಲಿದೆ. 2023ರಲ್ಲಿ ಸ್ಪಷ್ಟ ಉತ್ತರ ಸಿಗಲಿದೆ!!! ಸಿದ್ದರಾಮಯ್ಯನವರೇ, ಪಲಾಯನಕ್ಕೆ ಸಿದ್ಧವಾಗಿರಿ. #ವಲಸೆರಾಮಯ್ಯ ಎಂದು ಟ್ವೀಟ್​ ಮಾಡಿದೆ.

RELATED ARTICLES

Related Articles

TRENDING ARTICLES