Sunday, December 8, 2024

‘ಯಾರೆಲ್ಲಾ ಕೋಟ್ ಹೊಲಿಸಿಕೊಂಡಿದ್ದಾರೋ ಗೊತ್ತಿಲ್ಲ’

ಬೆಂಗಳೂರು : ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರಗೆ ಪಕ್ಷ ಹಾಗೂ ಸರ್ಕಾರದಲ್ಲಿ ಸ್ಥಾನಮಾನ ನೀಡುವ ಬಗ್ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವ್ಯಂಗ್ಯವಾಡಿದ್ದಾರೆ.

ಅಧಿಕಾರ ಸಿಗುತ್ತದೆ ಎಂಬ ಆಸೆಯೊಂದಿಗೆ ಯಾರೆಲ್ಲಾ ಕೋಟ್ ಹೊಲಿಸಿಕೊಂಡಿದ್ದಾರೋ ಗೊತ್ತಿಲ್ಲ ಎರಡು ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಅನಿವಾರ್ಯ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮಗೆ ಯಾರೂ ಅನಿವಾರ್ಯ ಅಲ್ಲ. ಬಿಜೆಪಿ ಮತ್ತೆ ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತದೆ ಎಂದರು.

ಸಚಿವ ಮುರುಗೇಶ್‌ ನಿರಾಣಿ ವಿರುದ್ಧ ಕಿಡಿಕಾರಿದ ಯತ್ನಾಳ್, ನಿರಾಣಿ ಯಾವ ರಾಜ್ಯಕ್ಕೆ ಸಿಎಂ ಆಗ್ತಾರೆ ಪಾಕಿಸ್ತಾನಕ್ಕಾ ಎಂದು ಪ್ರಶ್ನಿಸಿದರು. ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಸದ್ಯ ಬೊಮ್ಮಾಯಿ ಅವರು ಸಿಎಂ ಆಗಿದ್ದಾರೆ. ನಿರಾಣಿ ಏನು ಗುರಾಣಿನಾ ಎಂದು ಆಕ್ರೋಶ ವ್ಯಕ್ತಡಿಸಿದರು.

ನಿರಾಣಿನೇ ಆಗ್ಲಿ ಗುರಾಣಿನೇ ಆಗ್ಲಿ ಭ್ರಷ್ಟಾಚಾರ ಎಲ್ಲೇ ನಡೆದರೂ ಕೂಡ ತನಿಖೆ ಆಗಬೇಕು. ಭ್ರಷ್ಟಾಚಾರ ವಿಷಯ ಬಂದ್ರೆ ನಾನು ಬಹಿರಂಗವಾಗಿ ಮಾತಾಡ್ತೀನಿ. ತವರು ಜಿಲ್ಲೆ ಉಸ್ತುವಾರಿ ನೀಡದೇ ಇರುವುದು ಯಾರಿಗೂ ಅಸಮಾಧಾನ ಆಗಿಲ್ಲ. ನಿನ್ನೆ ಉಮೇಶ್ ಕತ್ತಿ ನನ್ನ ಜೊತೆ ಖುಷಿ ಖುಷಿಯಿಂದ ಇದ್ದರು ಎಂದು ಪ್ರತಿಕ್ರಿಯಿಸಿದ್ದಾರೆ.

RELATED ARTICLES

Related Articles

TRENDING ARTICLES