Thursday, January 9, 2025

ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿ ನಿರಾಕರಿಸಿರುವ RLD

ಮುಜಾಫರ್​ನಗರ (ಉತ್ತರ ಪ್ರದೇಶ): ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದೊಂದಿಗೆ ಚುನಾವಣೋತ್ತರ ಮೈತ್ರಿಯ ಸಾಧ್ಯತೆಯನ್ನು ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ಜಯಂತ್ ಚೌಧರಿ ಗುರುವಾರ ನಿರಾಕರಿಸಿದ್ದಾರೆ.

ನವದೆಹಲಿಯಲ್ಲಿ ಜಾಟ್ ನಾಯಕರ ಜೊತೆಗಿನ ಸಭೆಯಲ್ಲಿ ಕೇಂದ್ರ ಸಚಿವ ಅಮಿತ್​ ಶಾ ಅವರು ಆರ್​ಎಲ್​ಡಿಗೆ ಬಿಜೆಪಿ ಬಾಗಿಲು ಯಾವಾಗಲೂ ತೆರೆದಿರುತ್ತದೆ ಎಂದು ಹೇಳಿಕೆ ನೀಡಿದ ಮೇಲೆ RLD ಯಿಂದ ಈ ಹೇಳಿಕೆ ಬಂದಿರುವುದು ಭಾರಿ ರಾಜಕೀಯ ಮಹತ್ವವನ್ನು ಪಡೆದುಕೊಂಡಿದೆ ಹಾಗೂ ಬಿಜೆಪಿಗೆ ಮುಖಭಂಗವನ್ನುಂಟು ಮಾಡಿದೆ.

ಬಿಜೆಪಿ ಜೊತೆಗಿನ ಹೊಂದಾಣಿಕೆಯ ವಿಷಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚೌಧರಿ ‘ರೈತರಿಗೆ ಅವರು (ಬಿಜೆಪಿ) ಏನೂ ಮಾಡಿಲ್ಲ. ಎರಡು ದಿನಗಳ ಹಿಂದೆ ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಬಲವನ್ನು ಪ್ರಯೋಗಿಸಲಾಯಿತು, ಇಂತಹ ವಾತಾವರಣದಲ್ಲಿ ಯಾರಾದರೂ ಅವರ ಜೊತೆಗೆ ಕೈ ಜೋಡಿಸುತ್ತಾರೆ ಎಂದು ಅವರು  ಹೇಗೆ ಭಾವಿಸುತ್ತಾರೆ?’ ಎಂದು ಪತ್ರಕರ್ತರನ್ನೇ ಪ್ರಶ್ನಿಸಿದರು.

RELATED ARTICLES

Related Articles

TRENDING ARTICLES