Monday, December 23, 2024

ಸಿದ್ದು, ಡಿಕೆಶಿಗೆ ಸಿಎಂ ಆಗುವ ಹುಚ್ಚು : ಹೆಚ್‌ಡಿಕೆ

ಬೆಂಗಳೂರು : ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರಿಬ್ಬರಿಗೂ ಮುಖ್ಯಮಂತ್ರಿ ಆಗುವ ಹುಚ್ಚು ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಬ್ಬರಿಗೂ ಮುಖ್ಯಮಂತ್ರಿಯಾಗುವ ಹುಚ್ಚು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸೂಕ್ಷ್ಮ ವಿಚಾರಗಳಲ್ಲಿ ಕಾಂಗ್ರೆಸ್‌ ಪಕ್ಷ ರಾಜಕೀಯ ಮಾಡುವುದನ್ನು ಬಿಡಬೇಕು.

ಇಬ್ಬರಿಗೂ ಓಟು ಪಡೆಯುವ ಹಾಗೂ ಸಿಎಂ ಆಗುವ ಹುಚ್ಚುತನ ಹತ್ತಿಕೊಂಡಿದೆ. ಸಮಾಜಕ್ಕೆ ಒಳ್ಳೆಯದಾಗಲಿ ಎನ್ನುವುದು ಅವರಿಗಿಲ್ಲ. ಬಿಜೆಪಿಯವರಿಗೆ ಕೂಡ ಮತ ಪಡೆಯುವ ಹುಚ್ಚು ಬಂದಿದೆ ಎಂದು ಟೀಕಾ ಪ್ರಹಾರ ನಡೆಸಿದರು.

ಬಿಜೆಪಿಯವರಿಗು ಕೂಡಾ ಮತ ಪಡೆಯುವ ಹುಚ್ಚು. ಸಿದ್ದರಾಮಯ್ಯ ಒಂದು ಮಾತು ಹೇಳ್ತಾರೆ, ಡಿಕೆಶಿ ಒಂದು ಮಾತು ಹೇಳ್ತಾರೆ. ಒಬ್ಬರಿಗೆ ಮುಸ್ಲಿಂ ಮತಗಳನ್ನು ಪಡೆಯುವ ಹುಚ್ಚು, ಮತ್ತೊಬ್ಬರಿಗೆ ಮುಸ್ಲಿಂ ಪರ ಮಾತಾಡಿದ್ರೆ ಏನು ಹೆಚ್ಚು ಕಡಿಮೆ ಆಗುತ್ತೋ ಎಂಭ ಭಯ.

ಇನ್ನು, ಸಿಎಂ ಇಬ್ರಾಹಿಂ ಮೊದಲಿನಿಂದಲೂ ಜೆಡಿಎಸ್ ಜೊತೆ ಗುರ್ತಿಸಿಕೊಂಡವರು. ಮದ್ಯದಲ್ಲಿ ಕೆಲವು ವ್ಯತ್ಯಾಸಗಳು ಆಗಿದ್ದವು. ಈಗ ಮತ್ತೆ ಜೆಡಿಎಸ್ ಜೊತೆ ಸೇರಿ ಮತ್ತೊಂದು ರಂಗ ರಚನೆ ಬಗ್ಗೆ ಮುಂದಾದರೆ ಸ್ವಾಗತ ಮಾಡುತ್ತೇವೆ ಎಂದು ಹೆಚ್​​ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

RELATED ARTICLES

Related Articles

TRENDING ARTICLES