Wednesday, January 22, 2025

ಬಿಜೆಪಿ ಸರ್ಕಾರ ತಮ್ಮ ತಪ್ಪು ಮುಚ್ಚಿಕೊಳ್ಳಲು ಹೀಗೆ ಮಾಡ್ತೀದೆ : ಎಂ ಬಿ ಪಾಟೀಲ್

ಬೆಂಗಳೂರು : ಹಿಜಬ್ ವಿವಾದ ಬಿಜೆಪಿ ಸರ್ಕಾರದಿಂದ ಆಗುತ್ತಿದೆ. ರಾಜಕೀಯ ಉದ್ದೇಶಕ್ಕೆ ಇದನ್ನು ಬಳಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಎಂ.ಬಿ. ಪಾಟೀಲ್ ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಒಂದು ವರ್ಷ ಇದೆ. ಇದಕ್ಕೆ ತಮ್ಮ ತಪ್ಪು ಮುಚ್ಚಿಕೊಳ್ಳಲು ಬಿಜೆಪಿ ಹೀಗೆ ಮಾಡುತ್ತಿದೆ. ಸರ್ಕಾರ ತಪ್ಪು ಮಾಡಿದೆ. ಮಕ್ಕಳಲ್ಲಿ ವಿಷ ಬೀಜ ಬಿತ್ತು ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಆದೇಶ ಹೊರಡಿಸುವ ಮೊದಲು ಏನು ನಿಯಮ ಇತ್ತು. ಅದನ್ನು ಮುಂದುವರೆಸಬೇಕು. ಬಿಜೆಪಿಯಿಂದ ಇದು ಸ್ಪಾನ್ಸರ್ ಆಗಿರುವ ಪ್ರಕರಣವಾಗಿದೆ. ಇದು ಕಾಂಗ್ರೆಸ್ ಪ್ರಾಯೋಜಿತ ಅಲ್ಲ, ಇದು ಬಿಜೆಪಿ ಪ್ರಾಯೋಜಿತ ಎಂದು ಟೀಕಿಸಿದರು.

ಗೋವಾ ಪ್ರಣಾಳಿಕೆಗೆ ಕುಮಾರಸ್ವಾಮಿ ವಿರೋಧ ವಿಚಾರವಾಗಿ ಮಾತನಾಡಿದ ಅವರು, ಟೀಕೆ ಮಾಡುವವರ ಬಗ್ಗೆ ನಾವು ಮಾತಾಡುವುದಿಲ್ಲ. ಗೋವಾದಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ. ಪ್ರತಿ ಕುಟುಂಬಕ್ಕೆ ವರ್ಷಕ್ಕೆ 72 ಸಾವಿರ ಕೊಡುವ ಯೋಜನೆಯನ್ನು ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ ಎಂದು ಎಂ.ಬಿ. ಪಾಟೀಲ್ ಹೇಳಿಕೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES