Monday, December 23, 2024

ಯುಪಿಯಲ್ಲಿ ಟಿಎಂಸಿ ಪರ ಮಮತಾ ಬ್ಯಾನರ್ಜಿ ಪ್ರಚಾರ

ಉತ್ತರ ಪ್ರದೇಶ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಇಂದು ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್​ ಪಕ್ಷದ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ನಿನ್ನೆಯೇ ಅವರು ಲಖನೌಗೆ ಆಗಮಿಸಿದ್ದಾರೆ.

ಮಮತಾ ಬ್ಯಾನರ್ಜಿ ಇಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್​ ಯಾದವ್​ ಜತೆ ಸೇರಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯನ್ನೂ ನಡೆಸುವರು. ನಂತರ ಮಮತಾ ಬ್ಯಾನರ್ಜಿ ವರ್ಚ್ಯುವಲ್​ ರ್ಯಾಲಿ ನಡೆಸುವರು. ಉತ್ತರಪ್ರದೇಶಕ್ಕೆ ಹೊರಡುವ ಮುನ್ನ ಕೋಲ್ಕತ್ತದಲ್ಲಿ ಮಾತನಾಡಿದ್ದ ಅವರು, ಮುಂಬರುವ ಚುನಾವಣೆಗಳಲ್ಲಿ ಎಲ್ಲ ರಾಜ್ಯಗಳಲ್ಲೂ ಬಿಜೆಪಿಯನ್ನು ಸೋಲಿಸಬೇಕು. ಪ್ರಚಾರಕ್ಕೆ ಬರುವಂತೆ ಅಖಿಲೇಶ್​ ಯಾದವ್​ ನನ್ನನ್ನು ಕೇಳಿದ್ದಾರೆ. ಹಾಗಾಗಿ ಹೋಗುತ್ತಿದ್ದೇನೆ ಎಂದಿದ್ದರು.

ಮಮತಾ ಬ್ಯಾನರ್ಜಿಯವರು ವಾರಾಣಸಿಗೆ ಭೇಟಿ ಕೊಡುವ ಇಂಗಿತವನ್ನೂ ವ್ಯಕ್ತಪಡಿಸಿದ್ದಾರೆ. ಆದರೆ ಯಾವಾಗ ಎಂಬ ಬಗ್ಗೆ ಮಾಹಿತಿ ಇಲ್ಲ. ಇನ್ನು ಉತ್ತರ ಪ್ರದೇಶದ ಈ ಸಲದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಈಗಾಗಲೇ ಹೇಳಿಬಿಟ್ಟಿದ್ದಾರೆ. ಆದರೆ 2024ರ ಲೋಕಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಖಂಡಿತವಾಗಿ ಸ್ಪರ್ಧಿಸುತ್ತದೆ. ಬಿಜೆಪಿಯನ್ನು ಸೋಲಿಸಲು ಎಲ್ಲ ಪ್ರಾದೇಶಿಕ ಪಕ್ಷಗಳೂ ಒಂದಾಗಬೇಕು ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES