Wednesday, January 22, 2025

ಡಿಕೆಶಿ ಹೇಳಿಕೆ ಸತ್ಯಕ್ಕೆ ದೂರವಾದ ಮಾತು ಕಟೀಲ್ ತಿರುಗೇಟು

ಬೆಂಗಳೂರು : ಖಾಲಿ ಇದ್ದ ಧ್ವಜ ಸ್ತಂಭದಲ್ಲಿ ಓಂಕಾರ ಧ್ವಜ ಹಾರಿಸಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ಕೊಟ್ಟಿದ್ದಾರೆ.

ಕಾಲೇಜಿನಲ್ಲಿ ರಾಷ್ಟ್ರಧ್ವಜ ಇಳಿಸಿ ಕೇಸರಿಧ್ವಜ ಹಾರಿಸಿರುವ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೇಶದ ಜನರ ದಾರಿ ತಪ್ಪಿಸುವ ಹೇಳಿಕೆ ನೀಡಿದ್ದಾರೆ. ಇದು ಟೂಲ್ ಕಿಟ್‍ನ ಮುಂದುವರಿದ ಭಾಗ. ರಾಷ್ಟ್ರಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸಿದ್ದಾರೆ ಎಂಬ ಡಿಕೆಶಿ ಹೇಳಿಕೆ ಸತ್ಯಕ್ಕೆ ದೂರವಾದ ಮಾತು ಎಂದು ತಿರುಗೇಟು ನೀಡಿದ್ದಾರೆ.

ಭಾರತದ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುವ ಕಾಂಗ್ರೆಸ್ ಟೂಲ್‍ಕಿಟ್‍ನ ಭಾಗ ಇದು. ಕೋಮು ಸೌಹಾರ್ದತೆಗೆ ಧಕ್ಕೆ ತರುವ ವ್ಯವಸ್ಥಿತ ಹುನ್ನಾರ ಇದಾಗಿದೆ. ಖಾಲಿ ಇದ್ದ ಧ್ವಜ ಸ್ತಂಭದಲ್ಲಿ ಓಂಕಾರ ಧ್ವಜ ಹಾರಿಸಲಾಗಿದೆ. ತ್ರಿವರ್ಣ ಧ್ವಜ ಇಳಿಸಿ ಓಂಕಾರ ಧ್ವಜ ಹಾರಿಸಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ

RELATED ARTICLES

Related Articles

TRENDING ARTICLES