Monday, December 23, 2024

ಚಾಮುಂಡೇಶ್ವರಿಯಲ್ಲಿ ಹೆಚ್​​​ಡಿ ಕುಮಾರಸ್ವಾಮಿ ಸ್ಪರ್ಧೆ?

ಮೈಸೂರು : ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮುಂದಿನ ಜೆಡಿಎಸ್ ಅಭ್ಯರ್ಥಿ ನಾನೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಎಂದು ಕಾರ್ಯಕರ್ತರು ಪ್ರಶ್ನಿಸಿದಾಗ, ನಾನೇ ಕ್ಷೇತ್ರಕ್ಕೆ ಬರುತ್ತೇನೆ ಎಂದು ಹೇಳಿದ್ದಾರೆ. ಕುಟುಂಬ ರಾಜಕಾರಣ ಹೆಸರಲ್ಲಿ ನಮ್ಮ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದೆ.

ಈಗ ಕೇವಲ ನನ್ನ ಕುಟುಂಬದ ಬಗ್ಗೆ ಮಾತ್ರ ಮಾತನಾಡುತ್ತೇನೆ. ನಾನು, ನಮ್ಮ ಸಹೋದರರು ಬೇರೆಯಾಗಿದ್ದೇವೆ. ನಾನು ನನ್ನ ಪತ್ನಿ, ನನ್ನ ಮಗನ ಬಗ್ಗೆ ಮಾತ್ರ ಪ್ರಸ್ತಾಪಿಸುತ್ತಿದ್ದೇನೆ. ಹೆಚ್.ಡಿ. ದೇವೇಗೌಡರ ಬಗ್ಗೆ ನಾನು ಮಾತನಾಡುತ್ತಿಲ್ಲ ಎಂದು ಹೆಚ್.ಡಿ.ಕೆ. ಹೇಳಿದ್ದಾರೆ.

RELATED ARTICLES

Related Articles

TRENDING ARTICLES