ಬೆಂಗಳೂರು : ಪಂಚಮಸಾಲಿ ಸಮುದಾಯದ 3ನೇ ಪೀಠ ಸ್ಥಾಪನೆ ವಿಚಾರವಾಗಿ ಬೆಂಗಳೂರಲ್ಲಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಬುಧವಾರ ಹೇಳಿಕೆ ನೀಡಿದ್ದಾರೆ.
ಎಲ್ಲ ಪೀಠಕ್ಕೂ ನಮ್ಮ ಕುಟುಂಬದ ಬೆಂಬಲ, ಸಹಕಾರವಿರುತ್ತೆ. ಹಾಗೆಯೇ 3ನೇ ಪೀಠಕ್ಕೂ ನಮ್ಮ ಕುಟುಂಬದ ಬೆಂಬಲ ಇದೆ. ಸಮುದಾಯದ ಉಳಿದೆರಡು ಪೀಠಗಳಿಗೆ ಪರ್ಯಾಯ ಪೀಠವಲ್ಲ. 3ನೇ ಪೀಠದಲ್ಲೂ ಸಮುದಾಯದ ಎಲ್ಲ ಸ್ವಾಮೀಜಿಗಳು ಇರ್ತಾರೆ ಎಂದು ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಪಂಚಮಸಾಲಿ 3ನೇ ಪೀಠವಾದರೆ ತಪ್ಪೇನಲ್ಲ. ನನ್ನಲ್ಲಿ ಎರಡು ಪೀಠಗಳು ಒಂದೇ ಎಂಬ ಭಾವನೆ ಇದೆ.
ಮೂರನೇ ಪೀಠದ ಬಗ್ಗೆ ನನಗೆ ಗೊತ್ತಿಲ್ಲ. ಆದರೆ, 3ನೇ ಪೀಠ ಆದರೆ ತಪ್ಪಲ್ಲ, ಪಂಚಮಸಾಲಿ ಸಮಾಜ ದೊಡ್ಡದಿದೆ. ಇದಕ್ಕೆ ನಾವು ಸಹಮತ ವ್ಯಕ್ತಪಡಿಸಬೇಕು. ಸ್ವಾಮೀಜಿಗಳು ಆಪಾದನೆ ಬಿಟ್ಟು ಜವಾಬ್ದಾರಿ ತೆಗೆದುಕೊಳ್ಳಲಿ. ಅವರೇ ಮುಂದೆ ನಿಂತು ಪೀಠ ರಚನೆಯ ಜವಾಬ್ದಾರಿ ತೆಗೆದುಕೊಳ್ಳಬೇಕು. ಪ್ರತಿಷ್ಠೆಗಾಗಿ ಬರೀ ಅಪಾದನೆ ಮಾಡಬಾರದು ಎಂದು ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟಿದ್ದರು.