Wednesday, January 22, 2025

ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ: ಹೊರಟ್ಟಿ

ಹುಬ್ಬಳ್ಳಿ : ಸದ್ಯಕ್ಕೆ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ. ಬಿಜೆಪಿಗೆ ಸೇರುವ ಬಗ್ಗೆ ನಾನು ಎಲ್ಲೂ ಮಾತನಾಡಿಲ್ಲ ಎಂದು ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಸ್ಪಷ್ಟಪಡಿಸಿದರು. ನಗರದಲ್ಲಿಂದು ಮಾತನಾಡಿದ ಅವರು, ಶಿಕ್ಷಕರ ಕ್ಷೇತ್ರಕ್ಕೆ ಆಯಾ ಪಕ್ಷ ಗಳು ತಮ್ಮ ತಮ್ಮ ಅಭ್ಯರ್ಥಿಗಳನ್ನು ಪ್ರಕಟಿಸಿವೆ.

ಇನ್ನೂ ಮೇ ತಿಂಗಳಲ್ಲಿ ಚುನಾವಣೆ ಇದೆ. ನನ್ನ ಚುನಾವಣೆ ವಿಚಾರದಲ್ಲಿ ಜಾತಿ  ಪ್ರಶ್ನೆಯೇ ಬರಲ್ಲ. ಶಿಕ್ಷಕರ ಬೆಂಬಲ ನನಗಿದೆ.‌ ಯಾವ ಪಕ್ಷಕ್ಕೂ ಹೋಗಬೇಕೆಂಬುದಿಲ್ಲ. ಕೆಲವರು ಸ್ನೇಹಿತರ ಬಿಜೆಪಿಗೆ ಸೇರುವಂತೆ ಆಹ್ವಾನ ನೀಡಿದ್ದರು. ಮತ್ತೆ ಕೆಲವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಸಲಹೆ ನೀಡಿದ್ದಾರೆ.  ಇನ್ನೂ ಸಾಕಷ್ಟು ಸಮಯಾವಕಾಶವಿದೆ.

ಬಜೆಟ್ ಅಧಿವೇಶನದ ನಂತರ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದರು. ಮತಾಂತರ ನಿಷೇಧ ಕಾಯ್ದೆ ಬಜೆಟ್ ಅಧಿವೇಶನದಲ್ಲಿ ಪರಿಷತ್ ನಲ್ಲಿ ಮಂಡನೆ ಅನ್ನೋ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯಾವ ಮಸೂದೆಗಳು ಮಂಡನೆಯಾಗುತ್ತೆ ಅನ್ನೋದರ ಬಗ್ಗೆ ಮಾಹಿತಿಯಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES