Wednesday, January 22, 2025

ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಚುನಾವಣಾ ಕಾವು ಜೋರು

ಭಾರೀ ಕುತೂಹಲ ಕೆರಳಿಸಿರುವ ಪಂಚರಾಜ್ಯ ಚುನಾವಣಾ ಕಾವು ಜೋರಾಗಿದೆ. ಈ ಮಧ್ಯೆ ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಚುನಾವಣೆ ಮುಗಿದಿದೆ. ಮೊದಲ ಹಂತದಲ್ಲಿ ಸದ್ಯ ಬಿಜೆಪಿ ಸರ್ಕಾರದಲ್ಲಿರುವ 9 ಸಚಿವರು ಚುನಾವಣೆ ಎದುರಿಸಿದ್ದಾರೆ. ಒಟ್ಟಾರೆ 403 ಕ್ಷೇತ್ರಗಳಿಗೆ ಏಳು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.

ಮೊದಲ ಹಂತದಲ್ಲಿ 11 ಜಿಲ್ಲೆಗಳ 58 ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಒಟ್ಟು 623 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಹಂತದಲ್ಲಿ ಸುಮಾರು 2.27 ಕೋಟಿ ಮತದಾರರು ಮತದಾನ ಮಾಡಿದ್ದಾರೆ.. ಉತ್ತರ ಪ್ರದೇಶದ ಪಶ್ಚಿಮ ಜಿಲ್ಲೆಗಳ ವಿಧಾನಸಭೆ ಕ್ಷೇತ್ರದಲ್ಲಿ ಮತದಾನ ನಡೆದಿದ್ದು, ಈ ಭಾಗದ ಹಲವು ಕ್ಷೇತ್ರಗಳು ಜಾಟ್ ಸಮುದಾಯದ ಪ್ರಾಬಲ್ಯ ಇರುವ ಸ್ಥಳಗಳಾಗಿವೆ. ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮೂರು ಕೃಷಿ ಕಾಯ್ದೆಗಳನ್ನು ತೀವ್ರವಾಗಿ ಖಂಡಿಸಿ, ಹೋರಾಟ ಮಾಡಿದವರೇ ಈ ಭಾಗದಲ್ಲಿ ಹೆಚ್ಚಿನ ಜನರು ಇದ್ದಾರೆ. ಮೊದಲ ಹಂತದಲ್ಲಿ ಸದ್ಯ ಬಿಜೆಪಿ ಸರ್ಕಾರದಲ್ಲಿರುವ 9 ಸಚಿವರು ಚುನಾವಣೆ ಎದುರಿಸಿದ್ದಾರೆ..

ಬಿಜೆಪಿ ಆಡಳಿತವಿರುವ ಕರ್ನಾಟಕದಲ್ಲಿ ಸದ್ಯ ಹಿಜಾಬ್ ಸಂಘರ್ಷವಾಗುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರ ಮಾತುಗಳು ತುಂಬಾ ಮಹತ್ವ ಪಡೆದಿವೆ. ಹೌದು, ಪ್ರಧಾನಮಂತ್ರಿ ಮೋದಿ ಉತ್ತರ ಪ್ರದೇಶದಲ್ಲಿ ಚುನಾವಣಾ ರ್ಯಾಲಿ ನಡೆಸಿದರು. ಈ ವೇಳೆ ಮುಸ್ಲಿಂ ಮಹಿಳೆಯರ ಬಗ್ಗೆ ಮಾತನಾಡಿದ ಅವರು, ಭಾರತದಲ್ಲಿ ಮುಸ್ಲಿಂ ಮಹಿಳೆಯರ ಹಕ್ಕು ಮತ್ತು ಅಭಿವೃದ್ಧಿಯನ್ನು ತಡೆಯಲು ಕೆಲವರು ಹೊಸಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಮುಸ್ಲಿಂ ಮಹಿಳೆಯರ ಹಕ್ಕು ರಕ್ಷಣೆಗಾಗಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ರ್ಯಾಲಿಯಲ್ಲಿ ಹೇಳಿದರು. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ, ಪರೋಕ್ಷವಾಗಿ ಕರ್ನಾಟಕ ಹಿಜಾಬ್ ವಿಚಾರವನ್ನ ಬಿಜೆಪಿ ಆಡಳಿತವಿರುವ ಕರ್ನಾಟಕದ ಹಿಜಾಬ್ ವಿಚಾರವನ್ನು ಪ್ರಸ್ತಾಪಿಸಿದರು.

ಬಿಜೆಪಿ ಅಧಿಕಾರಕ್ಕೆ ಬಂದರೆ ಭಯ ಮುಕ್ತ ಜೀವನ ನಡೆಸಲು ಸಾಧ್ಯವಾಗುತ್ತದೆ. ಕಳೆದ ಐದು ವರ್ಷಗಳ ನನ್ನ ಶ್ರಮಕ್ಕೆ ನಿಮ್ಮ ಮತವೇ ವರದಾನವಾಗಿದೆ. ನಿಮ್ಮ ಮತವೂ ನಿಮ್ಮ ಭಯಮುಕ್ತ ಬದುಕಿಗೆ ಎಂಬುದನ್ನು ನೀವೇ ಖಚಿತಪಡಿಸಿಕೊಳ್ಳಿ. ದೊಡ್ಡ ನಿರ್ಧಾರದ ಸಮಯ ಬಂದಿದೆ ಎಂದರು.

‘ಉತ್ತರ ಪ್ರದೇಶವು ಕೇರಳವಾಗಿ ಬದಲಾದರೆ ಅಲ್ಲಿನ ಜನರು ಉತ್ತಮ ಶಿಕ್ಷಣ, ಆರೋಗ್ಯ ಸೇವೆ, ಸಾಮಾಜಿಕ ಸುಧಾರಣೆ, ಜೀವನ ಗುಣಮಟ್ಟ ಮತ್ತು ಸಾಮರಸ್ಯದ ಸಮಾಜವನ್ನು ಆನಂದಿಸುತ್ತಾರೆ. ಜಾತಿ, ಧರ್ಮದ ಹೆಸರಿನಲ್ಲಿ ಹತ್ಯೆ ಸಂಭವಿಸುವುದಿಲ್ಲ. ಉತ್ತರ ಪ್ರದೇಶದ ಜನತೆಗೆ ಬೇಕಿರುವುದೇ ಇದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ತಿರುಗೇಟು ನೀಡಿದ್ದಾರೆ. ಮತದಾರರು ತಪ್ಪು ಮಾಡಿದರೆ, ಉತ್ತರ ಪ್ರದೇಶವು ಮತ್ತೊಂದು ಕಾಶ್ಮೀರ, ಕೇರಳ ಅಥವಾ ಪಶ್ಚಿಮ ಬಂಗಾಳವಾಗಿ ಬದಲಾಗುತ್ತದೆ ಎಂಬ ಸಿಎಂ ಯೋಗಿ ಆದಿತ್ಯನಾಥ ಅವರ ಹೇಳಿಕೆಗೆ ಸಂಬಂಧಿಸಿ ಪಿಣರಾಯಿ ವಿಜಯನ್‌ ಟ್ವೀಟ್‌ ಮೂಲಕ ತಿರುಗೇಟು ನೀಡಿದ್ದಾರೆ.

‘ದಿ ಗ್ರೇಟ್ ಖಲಿ’ ಎಂದೇ ಪ್ರಸಿದ್ಧರಾದ WWE ಸೂಪರ್‌ ಸ್ಟಾರ್‌, ವೃತ್ತಿಪರ ಕುಸ್ತಿಪಟು ದಲೀಪ್ ಸಿಂಗ್ ರಾಣಾ ಭಾರತೀಯ ಜನತಾ ಪಕ್ಷ ಸೇರ್ಪಡೆ ಆಗಿದ್ದಾರೆ. ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿದೆ. ಈ ನಡುವೆ ‘ದಿ ಗ್ರೇಟ್ ಖಲಿ’ ಬಿಜೆಪಿ ಸೇರ್ಪಡೆ ಆಗಿದ್ದಾರೆ. ಮಾಜಿ ಪಂಜಾಬ್ ಪೊಲೀಸ್ ಅಧಿಕಾರಿ ‘ದಿ ಗ್ರೇಟ್ ಖಲಿ’, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರ ಸಮ್ಮುಖದಲ್ಲಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಕೇಂದ್ರದ ಮೂರು ಕೃಷಿ ಕಾಯ್ದೆಯ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಕುಸ್ತಿಪಟು ದಲೀಪ್ ಸಿಂಗ್ ರಾಣಾ ರೈತರಿಗೆ ಬೆಂಬಲ ಸೂಚಿಸಿದ್ದರು.

ಒಟ್ಟಿನಲ್ಲಿ ಪಂಚರಾಜ್ಯ ಗೆಲುವಿನ ಜಪ ಮಾಡ್ತಿರುವ ಕೇಸರಿ ಪಡೆಗೆ ಉತ್ತರ ಪ್ರದೇಶವೇ ಪ್ರಮುಖ ಅಖಾಡವಾಗಿದೆ.. ಇದೀಗ ಮೊದಲ ಹಂತದ ಚುನಾವಣೆ ನಡೆದಿದ್ದು, ಬಿಜೆಪಿ ಸರ್ಕಾರದ 9 ಪ್ರಮುಖರಿಗೆ ಯಾವ ರೀತಿ ಮತದಾರರು ಕೈ ಹಿಡಿಯಲಿದ್ದಾರೆ ಅಂತ ಕಾದು ನೋಡಬೇಕು.

RELATED ARTICLES

Related Articles

TRENDING ARTICLES