Sunday, May 19, 2024

ಟಿಪ್ಪು ಎಕ್ಸ್‌ಪ್ರೆಸ್ ರೈಲಿಗೆ ಒಡೆಯರ್​​ ಹೆಸರಿಡಿ : ಸಂಸದ ಪ್ರತಾಪ್ ಸಿಂಹ

ಮೈಸೂರು : ಟಿಪ್ಪು ಎಕ್ಸ್‌ಪ್ರೆಸ್ ಬದಲು ಮೈಸೂರಿಗೆ ರೈಲು ಸಂಪರ್ಕ ತಂದ ಮಹಾರಾಜರ ಕೊಡುಗೆ ಪ್ರತೀಕವಾಗಿ ಒಡೆಯರ್ ಎಕ್ಸ್‌ಪ್ರೆಸ್ ಎಂದು ಹೆಸರಿಡುವಂತೆ ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಪ್ರತಾಪ್ ಸಿಂಹ ಲಿಖಿತ ಮನವಿ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು ಮೈಸೂರು ರಾಜ್ಯ ಬೆಂಗಳೂರು-ಮೈಸೂರು ನಡುವೆ 1870ರಲ್ಲಿ ಯೋಜನೆ ರೂಪಿಸಲಾಯಿತು.1882ರ ಫೆ.25ರಂದು ರೈಲ್ವೆ ಸೇವೆ ಆರಂಭವಾಯಿತು. 10ನೇ ಚಾಮರಾಜ ಒಡೆಯರ್, ನಾಲ್ವಡಿ ಕೃಷ್ಣರಾಜ ಒಡೆಯರ್ ರೈಲ್ವೆ ಅಭಿವೃದ್ಧಿಗೆ ಮಹತ್ತರ ಕಾಣಿಕೆ ನೀಡಿದ್ದಾರೆ.ಹಾಗಾಗಿ ಮೈಸೂರು-ಬೆಂಗಳೂರು ನಡುವೆ ಪ್ರತಿನಿತ್ಯ ಸೇವೆ ನೀಡುತ್ತಿರುವ ಟಿಪ್ಪು ಎಕ್ಸ್‌ಪ್ರೆಸ್ ಹೆಸರನ್ನು ಒಡೆಯರ್ ಎಕ್ಸ್‌ಪ್ರೆಸ್ ಎಂದು ಬದಲಾಯಿಸಿ ಮೈಸೂರು ಒಡೆಯರಿಗೆ ಗೌರವ ಸಲ್ಲಿಸಬೇಕೆಂದು ಕೋರಿದ್ದಾರೆ.

ಜತೆಗೆ ಮೈಸೂರು ರೈಲ್ವೆ ನಿಲ್ದಾಣವನ್ನು ನಾಲ್ವಡಿ ಕೃಷ್ಣರಾಜ ಒಡೆಯರ್ ರೈಲ್ವೆ ನಿಲ್ದಾಣವೆಂದು ಮರು ನಾಮಕರಣ ಮಾಡಬೇಕೆಂದೂ ಮನವಿ ಮಾಡಿದ್ದಾರೆ.

RELATED ARTICLES

Related Articles

TRENDING ARTICLES