Saturday, November 2, 2024

ನಾಳೆಯಿಂದ ವಿಧಾನಮಂಡಲ ಜಂಟಿ ಅಧಿವೇಶನ

ಕರ್ನಾಟಕ ಸೇರಿದಂತೆ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸದ್ದು ಮಾಡಿರುವ ಹಿಜಾಬ್ ಹಾಗೂ ಕೇಸರಿ ಸಂಘರ್ಷ ತಾರಕಕ್ಕೇರಿರುವ ಸಂದರ್ಭದಲ್ಲೇ ವಿಧಾನಮಂಡಲದ ಜಂಟಿ ಅಧಿವೇಶನ ಸೋಮವಾರದಿಂದ ಆರಂಭವಾಗಲಿದೆ.ಸೋಮವಾರದಿಂದ 10 ದಿನಗಳ ಕಾಲ ಅಂದ್ರೆ ಫೆಬ್ರವರಿ 25ವರೆಗೂ ನಡೆಯಲಿರುವ ಜಂಟಿ ಅಧಿವೇಶನದ ಅಂಗವಾಗಿ ವಿಧಾನಸೌಧದಲ್ಲಿ ಸಿದ್ಧತಾ ಕಾರ್ಯ ನಡೆದಿದೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಾಳೆ ಮಧ್ಯಾಹ್ನ 11 ಗಂಟೆಗೆ ವಿಧಾನಸಭೆಯ ಸಭಾಂಗಣದಲ್ಲಿ ವಿಧಾನಮಂಡಲದ ಎರಡೂ ಸದನಗಳ ಸದಸ್ಯರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.. ಮಂಗಳವಾರದಂದು ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯ ಮಂಡನೆ ಆಗಲಿದ್ದು, ಭಾಷಣದ ಮೇಲಿನ ಚರ್ಚೆ ಆರಂಭಗೊಳ್ಳಲಿದೆ..ಸುಮಾರು 2,000ಕ್ಕೂ ಹೆಚ್ಚು ಪ್ರಶ್ನೆಗಳು ಸರ್ಕಾರದಿಂದ ಉತ್ತರ ಬಯಸಿ ಬಂದಿವೆ. ಅಧಿವೇಶನ ವೀಕ್ಷಿಸಲು ಈ ಬಾರಿ ಸಾರ್ವಜನಿಕರಿಗೂ ಅವಕಾಶ ಕಲ್ಪಿಸಲಾಗಿದೆ.

 

RELATED ARTICLES

Related Articles

TRENDING ARTICLES