Wednesday, January 22, 2025

ಕಾಲೇಜು ಆರಂಭವೇ ಮೊದಲ ಆದ್ಯತೆ : ಸಿಎಂ ಬೊಮ್ಮಾಯಿ

ಹಿಜಾಬ್‌-ಕೇಸರಿ ಶಾಲು ವಿವಾದ ಕುರಿತ ಪ್ರಕರಣ ನ್ಯಾಯಾಲಯದಲ್ಲಿದೆ. ಆ ಕುರಿತು ಹೆಚ್ಚು ಮಾತನಾಡುವುದಿಲ್ಲ. ಸದ್ಯ ರಾಜ್ಯದಲ್ಲಿ ಶಾಂತಿ ನೆಲೆಸಬೇಕು. ಮಕ್ಕಳಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ಮೂಡದಂತೆ ಕಾಲೇಜು ಆರಂಭವಾಗಬೇಕು ಎಂಬುದೇ ನನ್ನ ಮೊದಲ ಆದ್ಯತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ತೀವ್ರ ಸಂಘರ್ಷಕ್ಕೆ ಕಾರಣವಾಗಿರುವ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿ ಬೆಳಗಾವಿ ಹಾಗೂ ಹಾವೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ಸದ್ಯ ಮಕ್ಕಳು ಯಾವುದೇ ಭೇದ-ಭಾವವಿಲ್ಲದೆ ಒಮ್ಮನಸ್ಸಿನಿಂದ ಮೊದಲಿನಂತೆ ವಿದ್ಯಾರ್ಜನೆ ಮಾಡುವ ವಾತಾವರಣ ನಿರ್ಮಾಣ ಆಗಬೇಕು. ಅದೇ ನನ್ನ ಮೊದಲ ಆದ್ಯತೆ. ಹೈಕೋರ್ಟ್‌ ಕೂಡ ಇದನ್ನೇ ಹೇಳಿದೆ. ಮಕ್ಕಳ ಶಿಕ್ಷಣ ಮತ್ತು ಸುರಕ್ಷತೆಯೇ ನನ್ನ ಮೊದಲ ಆದ್ಯತೆ. ಈ ಕುರಿತು ರಾಜ್ಯ ಸರ್ಕಾರದಿಂದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

RELATED ARTICLES

Related Articles

TRENDING ARTICLES