Wednesday, January 22, 2025

‘ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ’

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕೂಗು ಪದೇ ಪದೇ ಕೇಳಿಸುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಕಾಗವಾಡ ಶಾಸಕ ಶ್ರೀಮಂತ ಪಾಟೀಲರಿಗೂ ಸಚಿವ ಸ್ಥಾನ ನೀಡಬೇಕೆಂದು ಅವರ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ.

ಕಳೆದ ಬಾರಿ ಕೊನೆ ಕ್ಷಣದಲ್ಲಿ ಅವರಿಗೆ ಸಚಿವ ಸ್ಥಾನ ಮಿಸ್​ ಆಗಿತ್ತು. ಬಿಜೆಪಿ ಸರ್ಕಾರ ರಚಿಸಲು ಶಾಸಕ ಶ್ರೀಮಂತ ಪಾಟೀಲ್​ರವರ ಸಹಕಾರವೂ ಇತ್ತು. ಈ ನಿಟ್ಟಿನಲ್ಲಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಒಂದು ವೇಳೆ ಸಚಿವ ಸಂಪುಟ ವಿಸ್ತರಣೆಯ ವೇಳೆ ಅವರನ್ನು ಪರಿಗಣಿಸದಿದ್ದರೇ ಶ್ರೀಮಂತ ಪಾಟೀಲ‌ ಅಭಿಮಾನಿ ಬಳಗದ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದು ಎಚ್ಚರಿಕೆಯನ್ನು ಅವರ ಅಭಿಮಾನಿಗಳು ನೀಡಿದ್ದಾರೆ.

RELATED ARTICLES

Related Articles

TRENDING ARTICLES