Wednesday, January 22, 2025

ಆತ್ಮಹತ್ಯೆ ಯತ್ನ; ಪತ್ನಿ ಸಾವು, ಪತಿ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹ ಹಿನ್ನೆಲೆ ಪೊಲೀಸ್ ಪೇದೆ ಮತ್ತು ಪೇದೆ ಪತ್ನಿ ಇಬ್ಬರು ಆತ್ಮಹತ್ಯೆಗೆ ಯತ್ನಸಿರುವ ದಾರುಣ ಘಟನೆ ನಡೆದಿದೆ. ಈ ದುರಂತದಲ್ಲಿ ಪೇದೆ ಪತ್ನಿ ಸ್ನೇಹ ಸಾವನ್ನಪ್ಪಿದ್ದರೆ, ಪತಿ ಪೇದೆ ಸುರೇಂದ್ರ ಸ್ಥಿತಿ ಗಂಭೀರವಾಗಿದೆ. ಅವರಿಗೆ ಚಿಕ್ಕಬಳ್ಳಾಪುರದ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಚಿಕ್ಕಬಳ್ಳಾಪುರ ತಾಲ್ಲೂಕು ಅಣಕನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಸುರೇಂದ್ರ ಚಿಕ್ಕಬಳ್ಳಾಪುರ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಪೇದೆಯಾಗಿದ್ದಾರೆ.  ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES