Monday, December 23, 2024

ಎಲ್ಲರೂ ಕೋರ್ಟ್​ ಆದೇಶ ಪಾಲಿಸಿ – ಸಿಎಂ ಬೊಮ್ಮಾಯಿ

ಬೆಂಗಳೂರು : ಮಕ್ಕಳ ವಿದ್ಯಾರ್ಜನೆಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.

ಆರ್.ಟಿ.ನಗರದ ತಮ್ಮ ನಿವಾಸದಲ್ಲಿ ಇಂದಿನಿಂದ ಕಾಲೇಜುಗಳು‌ ಆರಂಭ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನು‌ ಕಳಕಳಿಯ ಮನವಿ ಮಾಡ್ತೇನೆ. ಕೋರ್ಟ್​ನ‌ ಮಧ್ಯಂತರ ಆದೇಶ ಪಾಲಿಸಿ. ಅಂತಿಮ ತೀರ್ಪಿಗೆ ಸಂಯಮದಿಂದ ಕಾಯಬೇಕು. ಏನೇ ಗೊಂದಲ ಇದ್ದರೂ ನಿವಾರಣೆ ಮಾಡಿ. ಶಾಲೆ, ಕಾಲೇಜುಗಳ ಆಡಳಿತ ಮಂಡಳಿ, ಪೋಷಕರು ಪರಸ್ಪರ ಗೊಂದಲ ಬಗೆಹರಿಸಿಕೊಂಡು ಸೌಹಾರ್ದ ವಾತಾವರಣ ನಿರ್ಮಿಸಬೇಕು. ಮಕ್ಕಳ ವಿದ್ಯಾಭ್ಯಾಸಕ್ಕೆ ಆ ಮೂಲಕ‌ ಅವಕಾಶ ಮಾಡಿಕೊಡಬೇಕು ಎಂದರು.

ಸದನದಲ್ಲಿ ಈಶ್ವರಪ್ಪ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ನಿರ್ಧಾರ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ಅದನ್ನು ಸದನದಲ್ಲೇ ಎದುರಿಸುತ್ತೇವೆ ಎಂದರು.

RELATED ARTICLES

Related Articles

TRENDING ARTICLES