Monday, December 23, 2024

ಬಿಜೆಪಿ ನಾಯಕರಿಂದ ರಾಷ್ಟ್ರಧ್ವಜಕ್ಕೆ ಅವಮಾನ: ಬಿ.ಕೆ.ಹರಿಪ್ರಸಾದ್

ಬೆಂಗಳೂರು: ತ್ರಿವರ್ಣ ಧ್ವಜದ ಬಗ್ಗೆ ಗೌರವ ಇಲ್ಲದ ಸಂಘ ಪರಿವಾರದವರು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸಂಘಪರಿವಾರ ಮತ್ತು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಎಸ್ ಈಶ್ವರಪ್ಪ ಸೇರಿ ಹಲವು ಬಿಜೆಪಿ ನಾಯಕರು ರಾಷ್ಟ್ರ ಧ್ವಜಕ್ಕೆ ಅಪಮಾನಕಾರಿ ಹೇಳಿಕೆ ಕೊಡುತ್ತಿದ್ದಾರೆ. ತ್ರಿವರ್ಣ ಧ್ವಜದ ಬಗ್ಗೆ ಗೌರವ ಇಲ್ಲದ ಸಂಘ ಪರಿವಾರದಿಂದ ಅಪಮಾನ ಮಾಡುವ ಕೆಲಸ ಆಗುತ್ತಿದೆ. ಈಶ್ವರಪ್ಪ ಹೇಳಿಕೆ ರಾಷ್ಟ್ರ ವಿರೋಧಿಯಾಗಿದ್ದು, ಜಂಟಿ ಅಧಿವೇಶನದಲ್ಲಿ ನಿಯಮ 59ರ ಅಡಿಯಲ್ಲಿ ನಿಲುವಳಿ ಸೂಚನೆ ಮೇಲೆ ಚರ್ಚೆ ಮಾಡುವುದಕ್ಕೆ ಅವಕಾಶ ಕೊಡಬೇಕು ಎಂದು ಕೇಳುತ್ತಿದ್ದೇವೆ ಎಂದರು.

RELATED ARTICLES

Related Articles

TRENDING ARTICLES