Monday, December 23, 2024

ಈಶ್ವರಪ್ಪ ಅಪ್ಪಟ ರಾಷ್ಟ್ರಪ್ರೇಮಿ : ಸಚಿವ ಆರಗ ಜ್ಞಾನೇಂದ್ರ

ಪಕ್ಷದೊಳಗಿನ ನಾಯಕತ್ವ ಬಿಕ್ಕಟ್ಟನ್ನು ಮರೆಮಾಚಿ ಹುಸಿ ಒಗ್ಗಟ್ಟನ್ನು ಪ್ರದರ್ಶಿಸಲು ಕಾಂಗ್ರೆಸ್ ನಾಯಕರು ಸದನವನ್ನು ದುರುಪಯೋಗಪಡಿಸಿಕೊಳ್ಳುವ ಹುನ್ನಾರ ನಡೆಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಆಪಾದಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ರಾಷ್ಟ್ರ ಧ್ವಜ ಹಾರಿಸಲು ಪ್ರಯತ್ನಿಸಿದ ನಾಗರಿಕರನ್ನು ಗುಂಡಿಟ್ಟು ಕೊಂದ ಇತಿಹಾಸ ಹೊಂದಿರುವ ಕಾಂಗ್ರೆಸ್ ನಾಯಕರು ಅದೇ ರಾಷ್ಟ್ರಧ್ವಜವನ್ನು, ಧ್ವಜ ಸಂಹಿತೆಗೆ ವಿರುದ್ಧವಾಗಿ ಸದನದಲ್ಲಿ ಪ್ರದರ್ಶಿಸಿದ್ದಾರೆ. ರಾಷ್ಟ್ರಧ್ವಜವನ್ನು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಳಸಿಕೊಂಡಿರುವುದು, ಆ ಪಕ್ಷದ ದುರ್ಬಲ ಸ್ಥಿತಿಯನ್ನು ಪ್ರತಿಫಲಿಸುತ್ತದೆ ಎಂದು ಅಭಿಪ್ರಾಯ ವ್ಯಕ್ತಡಿಸಿದ್ದಾರೆ.

ಸಚಿವ ಕೆ ಎಸ್ ಈಶ್ವರಪ್ಪರವರಂಥ ಅಪ್ಪಟ ರಾಷ್ಟ್ರಪ್ರೇಮಿ ಹಾಗೂ ನಾಯಕರನ್ನು ಗುರಿಯಾಗಿಟ್ಟುಕೊಂಡು, ಕೆಸರೆರುಚುವ ವ್ಯರ್ಥ ಪ್ರಯತ್ನ ಬಿಟ್ಟು, ಸದನದ ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡಬೇಕು ಎಂದು ವಿನಂತಿಸಿದರು.

RELATED ARTICLES

Related Articles

TRENDING ARTICLES