Monday, December 23, 2024

ಕೋಳಿನಾ ಕೇಳಿ ಖಾರ ಅರಿಯಲ್ಲ : ಆರ್ ಅಶೋಕ್

ಬೆಂಗಳೂರು : ಕೋಳಿನಾ ಕೇಳಿ ಖಾರ ಅರಿಯೋ ಅಭ್ಯಾಸ ಬಿಜೆಪಿಗಿಲ್ಲ. ಮಹಾತ್ಮ ಗಾಂಧೀಜಿ ಇದ್ದಾಗ ಇದ್ದಿದ್ದು ಬೇರೆ ಕಾಂಗ್ರೆಸ್. ಈಗ ಇರೋದ್ ನಕಲಿ ಕಾಂಗ್ರೆಸ್. ಸ್ವಾತಂತ್ರ್ಯ ಹೋರಾಟದಲ್ಲಿದ್ದ ಕಾಂಗ್ರೆಸ್​​ಗೂ ಈಗಿರುವ ಕಾಂಗ್ರೆಸ್​ಗೂ ಸಂಬಂಧವಿಲ್ಲ ಎಂದು ಆರ್.ಅಶೋಕ್ ಟೀಕಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಜಾ ಮಾಡುವುದಾದ್ರೆ ಕಾಂಗ್ರೆಸ್​​ನವರನ್ನು ವಜಾ ಮಾಡಬೇಕು. ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನದ ಭಯೋತ್ಪಾದಕರು ಬಾವುಟ ಹಾರಿಸಿ ಎಂದಾಗ ಎಲ್ಲಿದ್ದರು ಇವರು?, ಇದು ಕಾಂಗ್ರೆಸ್​​ನವರ ರಾಜಕೀಯ ದೊಂಬರಾಟ ಅಷ್ಟೇ.

ಆರಾಮಾಗಿ ಧರಣಿ ಮಾಡಲಿ. ಮೋದಿ ಬಂದ ಮೇಲೆ ಇವರು ಎಲ್ಲಾ ಕಡೆ ನಿದ್ದೆ ಮಾಡ್ತಿದ್ದಾರೆ. ಎಲ್ಲಾ ಕಡೆ ಕಾಂಗ್ರೆಸ್ ಖಾಲಿ ಆಗ್ತಿದೆ. ಬಿಜೆಪಿ ಇಲ್ಲ ಅಂದಿದ್ರೆ ಕಾಂಗ್ರೆಸ್​​ಗೆ ಭಾರತ್ ಮಾತಾ ಕಿ ಜೈ ಎನ್ನುತ್ತಿರಲಿಲ್ಲ. ಇವರಿಗೆ ಇಟಲಿ ಮೇಲೆ ತುಂಬಾ ಆಸೆ ಎಂದು ಲೇವಡಿ ಮಾಡಿದರು.

RELATED ARTICLES

Related Articles

TRENDING ARTICLES