Wednesday, January 22, 2025

ಫೆ.27ರಿಂದ ಮತ್ತೆ ‘ಕೈ’ ಮೇಕೆದಾಟು ಪಾದಯಾತ್ರೆ

ಬೆಂಗಳೂರು: ರಾಜ್ಯದಲ್ಲಿ ಬಜೆಟ್ ಅಧಿವೇಶನ ಆರಂಭವಾಗುವ ಮೊದಲು ಮೇಕೆದಾಟು ಪಾದಯಾತ್ರೆ ಪೂರ್ಣಗೊಳಿಸಲು ಕರ್ನಾಟಕ ಕಾಂಗ್ರೆಸ್ ತೀರ್ಮಾನಿಸಿದೆ. ಮಾರ್ಚ್ ಮೊದಲ ವಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ಮಾಡಲಿದ್ದಾರೆ. ಇದಕ್ಕೂ ಮೊದಲು ಮೇಕೆದಾಟು ಪಾದಯಾತ್ರೆಯನ್ನು ಪೂರ್ಣಗೊಳಿಸಲು ಕಾಂಗ್ರೆಸ್ ತೀರ್ಮಾನಿಸಿದೆ.

ಜನವರಿ 9 ರಿಂದ 13ರ ತನಕ ಪಾದಯಾತ್ರೆ ನಡೆಸಿ ರಾಮನಗರದಲ್ಲಿ ಮೊಟಕುಗೊಳಿಸಲಾಗಿತ್ತು. ಈಗ ಅಲ್ಲಿಂದಲೇ ಪಾದಯಾತ್ರೆ ಆರಂಭಿಸಲಾಗುತ್ತದೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಈ ಕುರಿತು ಹೇಳಿಕೆ ನೀಡಿದ್ದು, ಬಜೆಟ್ ಅಧಿವೇಶನದೊಳಗೆ ಮೇಕೆದಾಟು ಪಾದಯಾತ್ರೆ ಪೂರ್ಣಗೊಳಿಸಲು ತೀರ್ಮಾನಿಸಿದ್ದೇನೆ. ಅದರಂತೆ ಫೆಬ್ರವರಿ 27ರಿಂದ ಪಾದಯಾತ್ರೆ ಆರಂಭಿಸುವ ಕುರಿತು ಚರ್ಚೆ ನಡೆದಿದೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES