Monday, December 23, 2024

ಈಶ್ವರಪ್ಪ ರಾಜೀನಾಮೆಗೆ ಪಟ್ಟು ಹಿಡಿದ ಕೈ ಪಡೆ

ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಉಭಯ ಸದನಗಳಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಗುರುವಾರ ಸಂಜೆಯಿಂದ ಅಹೋರಾತ್ರಿ ಧರಣಿ ಆರಂಭಿಸಿರುವ ಕಾಂಗ್ರೆಸ್ ನಾಯಕರು, ಈಶ್ವರಪ್ಪ ರಾಜೀನಾಮೆ ನೀಡುವವರೆಗೂ ಧರಣಿ ಮುಂದುವರಿಸುತ್ತೇವೆ. ಸದನದ ಒಳಗೂ, ಹೊರಗೂ ಹೋರಾಟ ಕೈಗೊಳ್ಳುತ್ತೇವೆ ಎಂದಿದ್ದಾರೆ. ಇಂದು ಬೆಳಗ್ಗೆ ಎದ್ದು ಹಲವು ಸದಸ್ಯರು ತಮ್ಮ ನಿವಾಸಕ್ಕೆ ತೆರಳಿ ಕೆಲ ಸಮಯ ಬಿಟ್ಟು ವಾಪಸ್​ ಆಗಲು ತೀರ್ಮಾನಿಸಿ ತೆರಳಿದ್ದಾರೆ.

ವಿಧಾನಸೌಧದ ಆವರಣದಲ್ಲೇ ವಾಯುವಿಹಾರ ಮಾಡಿದ್ದಾರೆ. ಸೋಮವಾರದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯಕರ್ತರ ಮೂಲಕ ಪ್ರತಿಭಟನೆ ನಡೆಸಲು ಸಹ ಪಕ್ಷ ನಿರ್ಧರಿಸಿದೆ.

RELATED ARTICLES

Related Articles

TRENDING ARTICLES