Monday, December 23, 2024

ಕಾಂಗ್ರೆಸ್​​ ಬೆದರಿಕೆಗೆ ನಾನು ಜಗ್ಗಲ್ಲ, ಬಗ್ಗಲ್ಲ, ಹಿಗ್ಗಲ್ಲ

ಕಾಂಗ್ರೆಸ್ ನಾಯಕರ ಬೆದರಿಕೆಗೆಲ್ಲ ನಾನು ಜಗ್ಗಲ್ಲ, ಬಗ್ಗಲ್ಲ, ಹಿಗ್ಗಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ತಿರುಗೇಟು ನೀಡಿದರು.

ದೇಶದ ಹಿತದೃಷ್ಟಿಯಿಂದ ಹೇಳಿಕೆ ನೀಡಿದ್ದೆ. ರಾಷ್ಟ್ರಧ್ವಜ ನನ್ನ ತಾಯಿ ಸಮಾನ. ಇದಕ್ಕೆ ಯಾರದರೂ ಅವಮಾನ ಮಾಡಿದರೇ ಅವರು ರಾಷ್ಟ್ರದ್ರೋಹಿ ಎನಿಸಿಕೊಳ್ಳುತ್ತಾನೆ. ಇದನ್ನು ಈ ಮೊದಲೇ ಸ್ಪಷ್ಟಪಡಿಸಿದ್ದೇನೆ ಎಂದರು. ಭಗವಾಧ್ವಜದ ವಿವಾದವನ್ನು ಇಲ್ಲಿಗೆ ಬಿಡಿ ಎಂದು ನಾನು ಹೇಳಲ್ಲ. ಎರಡು ಪಕ್ಷದವರು ಜನರ ಮಧ್ಯೆ ಹೋಗೋಣ ಬನ್ನಿ. ರಾಷ್ಟ್ರಧ್ವಜದ ಬಗ್ಗೆ ಜನರೇ ತೀರ್ಮಾನ ಮಾಡಲಿ. ಅವರು ಬರಲಿ, ನಾವು ಹೋಗೋಣ ಬನ್ನಿ. ಮತ್ತೊಮ್ಮೆ ಈ ಬಗ್ಗೆ ನಾನು ಮಾತನಾಡೊಲ್ಲ. ವಿಧಾನಸಭೆ ಕಲಾಪದಲ್ಲಿ ಈ ವಿಷಯವನ್ನು ಕೈ ಬಿಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಹೇಳಿದರು.

 

RELATED ARTICLES

Related Articles

TRENDING ARTICLES