Monday, December 23, 2024

ಸುರಕ್ಷಿತವಾಗಿ ತಾಯಿನಾಡಿಗೆ ಮರಳಿದ ಉಕ್ರೇನ್​ ವಿದ್ಯಾರ್ಥಿಗಳು

ಯುದ್ಧ ಪೀಡಿತ ಉಕ್ರೇನ್​​ನಿಂದ ಸುರಕ್ಷಿತವಾಗಿ ರಾಜ್ಯದ 12 ಜನ ವಿದ್ಯಾರ್ಥಿಗಳು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇಂದು ಬೆಳಗ್ಗೆ ಆಗಮಿಸಿದರು.

ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರು ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡ್ರು. ಉಕ್ರೇನ್​ನಿಂದ ಮೊದಲು ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿದ್ಯಾರ್ಥಿಗಳು ಅಲ್ಲಿಂದ ಏರ್ ವಿಸ್ತಾರದಲ್ಲಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣ ತಲಪಿದರು. ಇದೇ ವೇಳೆ ವಿದ್ಯಾರ್ಥಿಗಳನ್ನು ಪ್ರೀತಿಯಿಂದ ಬರಮಾಡಿಕೊಂಡ ಏರ್ಪೋರ್ಟ್ ಸಿಬ್ಬಂದಿ, ಪೋಷಕರು ಮತ್ತು ಅಧಿಕಾರಿಗಳು ಸಂತಸ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರವು ಏರ್ ಲಿಫ್ಟ್ ಮೂಲಕ ವಿದ್ಯಾರ್ಥಿಗಳನ್ನು ಭಾರತಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದೆ.

RELATED ARTICLES

Related Articles

TRENDING ARTICLES