ಕರ್ನಾಟಕದಲ್ಲಿರೋ ವಿದೇಶಿಗರು ನಡೆಸುತ್ತಿರುವ ಡ್ರಗ್ಸ್ ದಂಧೆಯ ಬಗ್ಗೆ ವಿಧಾನ ಪರಿಷತ್ನಲ್ಲಿ ಇಂದು ಚರ್ಚೆ ನಡೆಯಿತು.
ವಿದೇಶಿಗರು ಮತ್ತು ಡ್ರಗ್ಸ್ ದಂಧೆಕೋರರ ಪಾಲಿಗೆ ನಮ್ಮ ದೇಶ ಧರ್ಮಛತ್ರ ಆಗಬಾರದು. ಇದನ್ನು ತಡೆಯಲು ರಾಜ್ಯ ಸರ್ಕಾರ ಎಲ್ಲ ಕ್ರಮ ತೆಗೆದುಕೊಳ್ಳುತ್ತಿದೆ. ಪ್ರತಿ ಪೊಲೀಸ್ ಸ್ಟೇಷನ್ನಲ್ಲಿಯೂ ರಿಜಿಸ್ಟರ್ ನಿರ್ವಹಿಸಲು ಸೂಚಿಸಿದ್ದೇನೆ. ದೇಶದ ಏಕತೆ ಮತ್ತು ಭದ್ರತೆಯ ವಿಚಾರದಲ್ಲಿ ಎಂದಿಗೂ ರಾಜಿಯಾಗುವುದಿಲ್ಲ. ನೈಜಿರಿಯಾ ಪ್ರಜೆಗಳು ಡ್ರಗ್ಸ್ ದಂಧೆಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿದ್ದಾರೆ. ನೈಜಿರಿಯಾ ಹೆಣ್ಣು ಮಕ್ಕಳನ್ನು ನಿಯಂತ್ರಿಸುವುದು ನಮ್ಮ ಪೊಲೀಸರಿಗೆ ಕಷ್ಟವಾಗುತ್ತಿದೆ. ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿ ಈವರೆಗೆ 8000ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಡ್ರಗ್ಸ್ ಪಿಡುಗು ನಿಯಂತ್ರಣಕ್ಕೆ ಬರದಿದ್ದರೆ ಪೊಲೀಸರನ್ನೇ ಹೊಣೆಯಾಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.