Monday, December 23, 2024

ಮಾರ್ಚ್ 12ರಿಂದ ಪಿಂಕ್ ಬಾಲ್ ಟೆಸ್ಟ್

ಬೆಂಗಳೂರು: ಮೊಹಾಲಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 222 ರನ್​ಗಳ ಅಮೋಘ ಗೆಲುವು ಸಾಧಿಸಿ 1-0 ಮುನ್ನಡೆ ಪಡೆದುಕೊಂಡಿರುವ ಭಾರತ ತಂಡ ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್ 12 ರಿಂದ ಪಿಂಕ್ ಬಾಲ್ ಟೆಸ್ಟ್ ಪ್ರಾರಂಭವಾಗಲಿದೆ. ಇದು ಭಾರತದಲ್ಲಿ ನಡೆಯುತ್ತಿರುವ ಎರಡನೇ ಡೇ-ನೈಟ್ ಟೆಸ್ಟ್ ಪಂದ್ಯವಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ಅಲ್ಲದೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಪಂದ್ಯ ವೀಕ್ಷಿಸಲು ಶೇ.100 ರಷ್ಟು ಪ್ರೇಕ್ಷಕರಿಗೆ ಅನುಮತಿ ನೀಡಿದ್ದು, ಹೀಗಾಗಿ ತುಂಬಿದ ಕ್ರೀಡಾಂಗಣದಲ್ಲಿ ಇಂಡೋ-ಲಂಕಾ ಕದನ ನಡೆಯಲಿದೆ. ಎರಡನೇ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಆಡುವ ಬಳಗ ಹೇಗಿರಲಿದೆ ಎಂಬುದೇ ಕುತೂಹಲ ಮೂಡಿಸಿದೆ.

RELATED ARTICLES

Related Articles

TRENDING ARTICLES