Wednesday, January 22, 2025

‘ನನ್ನ ಮಗನಿಗೆ ಟಿಕೆಟ್ ಕೊಡಿ’ :ಜಿ.ಟಿ.ದೇವೆಗೌಡ

ಮೈಸೂರು: ಕಾಂಗ್ರೆಸ್‌ ಸೇರಲು ಜೆಡಿಎಸ್‌ ಶಾಸಕ ಜಿ ಟಿ ದೇವೇಗೌಡ ಕಂಡೀಷನ್‌ ಹಾಕಿದ್ದಾರೆ. ನನ್ನ ಮಗ ಹರೀಶ್ ಗೌಡ‌ಗೆ ಟಿಕೆಟ್ ನೀಡುವ ವಿಚಾರದಲ್ಲಿ ಕಾಂಗ್ರೆಸ್ ತೀರ್ಮಾನದ ಬಳಿಕ ಉಳಿದ ಮಾತುಕತೆ ಎಂದು ಮೈಸೂರಿನಲ್ಲಿ ಶಾಸಕ ಜಿ.ಟಿ. ದೇವೇಗೌಡ ಹೇಳಿದ್ದಾರೆ.

ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಇಬ್ಬರಿಗೂ ನಾನು ಸ್ಪಷ್ಟವಾಗಿ ಹೇಳಿದ್ದೇನೆ. ನನ್ನ ಮಗನಿಗೆ ಟಿಕೆಟ್ ಕೊಡುವ ವಿಚಾರದಲ್ಲಿ ನಿಮ್ಮ ನಿರ್ಧಾರ ತಿಳಿಸಿ, ನಂತರ ನನ್ನ ತೀರ್ಮಾನ ಹೇಳುತ್ತೇನೆ ಅಂತ. ನಾವು ಹುಣಸೂರು ಕ್ಷೇತ್ರಕ್ಕೆ ಮೊದಲ ಆದ್ಯತೆ ನೀಡುತ್ತೇವೆ. ಕೆ.ಆರ್.ನಗರ ಎರಡನೇ ಆದ್ಯತೆ ಚಾಮರಾಜ ಕ್ಷೇತ್ರಕ್ಕೆ ಮೂರನೇ ಆದ್ಯತೆ. ಈ ಮೂರರಲ್ಲಿ ಯಾವುದಾದರೂ ಒಂದು ಕ್ಷೇತ್ರದಲ್ಲಿ ನನ್ನ ಮಗನಿಗೆ ಟಿಕೆಟ್ ನೀಡಲಿ. ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುತ್ತೇನೆ ಅಂತ ಜಿ ಟಿ ದೇವೇಗೌಡ ಹೇಳಿದ್ದಾರೆ.

ಈ ನಡುವೆ ಬಿಜೆಪಿಯವರು ಕೂಡ ನಮ್ಮ ಜೊತೆ ಇರಿ ಎಂದು ಕೇಳುತ್ತಿದ್ದಾರೆ. ಅವರು ತಂದೆ – ಮಗ ಇಬ್ಬರಿಗೂ ಟಿಕೆಟ್ ಕೊಡುವ ಭರವಸೆ ನೀಡಿದ್ದಾರೆ. ಆದರೆ ನಾನು ಸದ್ಯಕ್ಕೆ ಯಾವ ನಿರ್ಧಾರವನ್ನೂ ಮಾಡಿಲ್ಲ. ಇನ್ನು 6 ತಿಂಗಳ ನಂತರ ಚಾಮುಂಡಿ ತಾಯಿಯ ನಿರ್ಣಯದಂತೆ ನಾನು ನಿರ್ಧಾರ ಕೈಗೊಳ್ಳುತ್ತೇನೆ ಎಂದರು.

ಜೆಡಿಎಸ್ ನವರು ನನ್ನನ್ನು ಇದುವರೆಗೂ ಸಂಪರ್ಕಿಸಿಲ್ಲ. ಪಕ್ಷದ ಯಾವ ಸಭೆ, ಸಮಾರಂಭಕ್ಕೂ ಕರೆಯುತ್ತಿಲ್ಲ. ಸಿಎಂ ಸ್ಥಾನದಿಂದ ಎಚ್ಡಿಕೆ ಕೆಳಗೆ ಇಳಿದ ನಂತರದ ದಿನದಿಂದ ನನ್ನ ಜೊತೆ ಜೆಡಿಎಸ್ ನವರು ಸಂಪರ್ಕದಲ್ಲಿ ಇಲ್ಲ ಎಂದು ಶಾಸಕ ಜಿ.ಟಿ.ದೇವೆಗೌಡ ಹೇಳಿದ್ದಾರೆ.

RELATED ARTICLES

Related Articles

TRENDING ARTICLES