Saturday, December 21, 2024

ಇಂದು ಸಿಎಂ ಆಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕಾರ

ಚಂಡೀಗಢ: ಪಂಜಾಬ್‌ನ 17ನೇ ಮುಖ್ಯಮಂತ್ರಿಯಾಗಿ ಆಮ್ ಆದಿ ಪಾರ್ಟಿಯ ಭಗವಂತ್ ಮಾನ್ ಅವರ ಗುರುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಹುಟ್ಟೂರು ಖತ್ತರ್ ಕಲನ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಾನ್ ಒಬ್ಬರೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆಮ್ ಆದಿ ಪಾರ್ಟಿ ರಾಷ್ಟ್ರೀಯ ಸಂಯೋ ಜಕರಾಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜಿವಾಲ್ ಹಾಗೂ ಪಕ್ಷದ ಮುಖಂಡರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ನಡೆಯುವ ನಿರೀಕ್ಷೆ ಇದೆ. ಮುಖ್ಯಮಂತ್ರಿಯನ್ನು ಹೊರತುಪಡಿಸಿ 17 ಜನ ಸದಸ್ಯರಾಗಬಹುದು.

”ಪಂಜಾಬ್‌ನ ಅಭಿವೃದ್ಧಿ ಮತ್ತು ರಕ್ಷಣೆಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧ,” ಎಂದು ತಮ್ಮೊಂದಿಗೆ ಪಂಜಾಬ್‌ನ ಮೂರು ಕೋಟಿ ಜನರೂ ಪ್ರಮಾಣ ಸ್ವೀಕರಿಸಬೇಕು ಎಂದು ನಿಯೋಜಿತ ಮುಖ್ಯಮಂತ್ರಿ ಭಗವಂತ್ ಮಾನ್ ಕರೆ ನೀಡಿದ್ದಾರೆ. ಕಾರ್ಯಕ್ರಮಕ್ಕೆ ಬರುವ ಪುರುಷರು ಹಳದಿ ಬಣ್ಣದ ಪೇಟ ಮತ್ತು ಮಹಿಳೆಯರು ಹಳದಿ ಬಣ್ಣದ ದುಪಟ್ಟಾ ಧರಿಸಿ ಬರಬೇಕು ಎಂದು ಅವರು ಮನವಿ ಮಾಡಿದ್ದಾರೆ. ಮಾನ್ ಸದಾ ಹಳದಿ ಬಣ್ಣದ ಪೇಟ ಧರಿಸುತ್ತಾರೆ.

ಕಾರ್ಯಕ್ರಮದಲ್ಲಿ 3 ಲಕ್ಷ ಜನ ಭಾಗವಹಿಸಬಹುದು ಎಂದು ಅಂದಾಜಿಸಲಾಗಿದೆ. ಸುಮಾರು 50 ಎಕರೆ ವಿಸ್ತೀರ್ಣದ ಪ್ರದೇಶದಲ್ಲಿ ಬೃಹತ್ ಪೆಂಡಾಲ್ ಹಾಕಲಾಗಿದ್ದು, ವಾಹನ ನಿಲುಗಡೆಗೂ 50 ಎಕರೆ ಪ್ರದೇಶದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಭದ್ರತೆಗಾಗಿ 10 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. 117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯಲ್ಲಿ ಆಮ್ ಆದ್ರಿ ಪಾರ್ಟಿ 92 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

RELATED ARTICLES

Related Articles

TRENDING ARTICLES