Monday, December 23, 2024

ಅನುಮಾನಸ್ಪದ ರೀತಿಯಲ್ಲಿ ಚಿರತೆ ಸಾವು

ಚಾಮರಾಜನಗರ: ಚಿರತೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ನಡೆದಿದೆ.

ಹಳ್ಳದ ಮಾದಹಳ್ಳಿ ಗ್ರಾಮದ ನಾಗಮಲ್ಲಪ್ಪ ಎಂಬವರ ಜಮೀನಿನಲ್ಲಿ ಹೆಣ್ಣು ಚಿರತೆಯ ಶವ ಪತ್ತೆಯಾಗಿದೆ. ಈ ಗ್ರಾಮ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ಜೋನಿನ ವ್ಯಾಪ್ತಿಗೆ ಒಳಪಟ್ಟಿದೆ. ಶವ ಪತ್ತೆಯಾದ ರೀತಿ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸ್ಥಳಕ್ಕೆ ಬಂಡೀಪುರ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

RELATED ARTICLES

Related Articles

TRENDING ARTICLES