ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಲ್ಲಿ ಸಚಿವ ವಿ. ಸೋಮಣ್ಣ ವಿರುದ್ಧ ಸಮನ್ಸ್ ಜಾರಿ ಮಾಡಲಾಗಿದೆ. ಮತ್ತು ಜನಪ್ರತಿನಿಧಿಗಳ ನ್ಯಾಯಾಲಯದಿಂದ ಆದೇಶ ನೀಡಲಾಗಿದೆ.
2013 ರಲ್ಲಿ ರಾಮಕೃಷ್ಣ ಎಂಬವರು ಖಾಸಗಿ ದೂರು ದಾಖಲಿಸಿದ್ದರು. ಈ ಬಗ್ಗೆ ಕೋರ್ಟ್ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿತ್ತು. ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ಸೂಚಿಸಿತ್ತು. ಆದರೆ, ಲೋಕಾಯುಕ್ತ ಪೊಲೀಸರು ಆದಾಯ ಮೀರಿ ಆಸ್ತಿ ಗಳಿಸಿಲ್ಲವೆಂದು ವರದಿ ನೀಡಿದ್ದರು. ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ನ್ನು ಕೋರ್ಟ್ ತಿರಸ್ಕರಿಸಿದೆ.
ಶಾಸಕನಾಗುವ ಮೊದಲಿನ ಆದಾಯ, ನಂತರದ ಆದಾಯ, ಗಳಿಸಿದ ಆಸ್ತಿಯ ಸೂಕ್ತ ವಿವರಣೆಯನ್ನು ಪೊಲೀಸರು ನೀಡಿಲ್ಲ. ಹೀಗಾಗಿ ಅಸಮರ್ಪಕ ತನಿಖೆ ಎಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಹಾಗೂ ಏಪ್ರಿಲ್ 16ಕ್ಕೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿಗೆ ನ್ಯಾ. ಬಿ.ಜಯಂತ್ ಕುಮಾರ್ ಆದೇಶ ನೀಡಿದ್ದಾರೆ.