ಮೈಸೂರು: ಭಾವನಾತ್ಮಕ ವಿಚಾರಗಳಿಂದ ಬಿಜೆಪಿಯವ್ರೇ ಇಕ್ಕಟ್ಟಿಗೆ ಸಿಲುಕುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಮೈಸೂರು ಜಿಲ್ಲೆ ಸಿದ್ದರಾಮನಹುಂಡಿಯಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜನ ಏನ್ ದಡ್ಡರಲ್ಲ, ಎಲ್ಲವನ್ನ ಗಮನಿಸುತ್ತಾರೆ. ಶಿವಮೊಗ್ಗ ಹರ್ಷ ಕುಟುಂಬಕ್ಕೆ 25 ಲಕ್ಷ ಪರಿಹಾರ ಕೊಡ್ತಾರೆ. ಅದೇ ಕರಾವಳಿಯ ದಿನೇಶ್ ಕುಟುಂಬಕ್ಕೆ ಕೊಟ್ರಾ(?) ದುಡ್ಡು ಅಂದ್ರೆ ಇವರ ಅಪ್ಪನ ಮನೆಯದ್ದಾ(?) ಸಾರ್ವಜನಿಕರು ಬೆವರು ಸುರಿಸಿ ದುಡಿದು ಕಟ್ಟಿದ ತೆರಿಗೆ ಹಣ. ಇವರು ಯಾವಾಗಲೂ ಜನರಿಗೆ ಮಕ್ಮಲ್ ಟೋಪಿ ಹಾಕಬಹುದು ಅಂದುಕೊಂಡಿದ್ದಾರೆ. ಜನರಿಗೆ ಸತ್ಯ ಗೊತ್ತಾಗುತ್ತದೆ ಒಂದು ದಿನ ಎಂದು ಆರ್‌ಎಸ್‌ಎಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ರಾಗಿಗೆ ಬೆಂಬಲ ಬೆಲೆ ಕೊಟ್ಟಿದ್ರಾ(?) ರಾಗಿ ಬೆಳೆದವರಿಗೆ ಗೊತ್ತಾಗಲ್ವಾ(?) ಇವರು ಪೀಪಲ್ಸ್ ಮೆಮೋರಿ ಶಾರ್ಟ್ ಅಂತ ತಿಳಿದುಕೊಂಡಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ದ ಕಿಡಿಕಾರಿದರು.
ಅದುವಲ್ಲದೇ, ಹಿಜಾಬ್ ವಿವಾದ ಹುಟ್ಟುಹಾಕಿದ್ದೆ ಬಿಜೆಪಿಯವ್ರು. ಮುಸ್ಲಿಂ ಹೆಣ್ಣು ಮಕ್ಕಳು ಒಂದು ದುಪ್ಪಟ್ಟ ತಲೆ ಹಾಕಿ ಕೊಳ್ಳುತ್ತೇನೆ ಎಂದರೆ ಅದರಲ್ಲಿ ತಪ್ಪೇನಿದೆ(?) ಹಿಂದೂ ಹೆಣ್ಣು ಮಕ್ಕಳು ತಲೆ ಮೇಲೆ ಬಟ್ಟೆ ಹಾಕಿ ಕೊಳ್ಳಲ್ವಾ(?) ಸ್ವಾಮೀಜಿಗಳು ತಲೆ ಮೇಲೆ ಕಾವಿ ಹಾಕುತ್ತಾರೆ. ಅದನ್ನು ನೀವು ಪ್ರಶ್ನೆ ಮಾಡುತ್ತೀರಾ(?) ಇಂತಹ ವಿವಾದ ಸೃಷ್ಟಿಸಿ ಅದನ್ನು ಅರಗಿಸಿ ಕೊಳ್ಳುತ್ತೇವೆ ಎಂದು ಬಿಜೆಪಿ ಅಂದುಕೊಂಡಿದೆ. ಆದರೆ, ಜನ ಬುದ್ದಿವಂತರು. ಜನರಿಗೆ ಬಿಜೆಪಿಯ ತಂತ್ರ ಅರ್ಥವಾಗಿದೆ ಎಂದರು.
ಸಂಘ ಪರಿವಾರದವರು ಅಲ್ಪ ಸಂಖ್ಯಾತರ ಕೊಲೆ ಮಾಡಿದರೆ ಅವರಿಗೆ ಕಡಮೆ ಪರಿಹಾರ ಹಣ ಕೊಡುತ್ತಾರೆ. ಮುಸ್ಲಿಂರು ಹಿಂದೂವಿನ ಕೊಲೆ ಮಾಡಿದರೆ ಜಾಸ್ತಿ ಪರಿಹಾರ ಕೊಡುತ್ತಾರೆ. ಇಂತಹ ತಾರತಮ್ಯ ಯಾಕೆ(?) ಇಂತಹ ವರ್ತನೆಯಿಂದ ಮತ ಕ್ರೂಢೀಕರಣ ಆಗುತ್ತೆ ಎಂಬ ಬಿಜೆಪಿ ಲೆಕ್ಕ ಉಲ್ಟಾ ಆಗುತ್ತೆ ನೋಡಿ ಎಂದಿದ್ದಾರೆ.
ಬಿಜೆಪಿ ಕೆಲ ವಿವಾದ ಸೃಷ್ಟಿಸಿ ಮತ ಕ್ರೂಢೀಕರಣ ಮಾಡಲು ಯತ್ನಿಸುತ್ತಿದೆ. ಮುಸ್ಲಿಂರಿಗೆ ವ್ಯಾಪಾರಕ್ಕೆ ನಿರ್ಬಂಧ ಹಾಕಿರೋದು ತಪ್ಪು. ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ವ್ಯಾಪಾರಕ್ಕೆ ನಿರ್ಬಂಧ ಹಾಕುವುದರ ಹಿಂದೆ ಬಿಜೆಪಿಯ ಅಜೆಂಡಾ ಅಡಗಿದೆ. ಮುಸ್ಲಿಂರಿಗೆ ವ್ಯಾಪಾರ ನಿರ್ಬಂಧ ವಿಚಾರದಲ್ಲಿ ಕಾಂಗ್ರೆಸ್ ಇಕ್ಕಟ್ಟಿಗೆ ಸಿಲುಕಿಲ್ಲ. ಬಿಜೆಪಿಯೇ ಈ ವಿಚಾರದಲ್ಲಿ ಇಕ್ಕಟಿಗೆ ಸಿಲುಕಿದೆ ಎಂದು ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.