Monday, December 23, 2024

ಇಂದಿನಿಂದ ಇಂಡಿಯನ್ ಪ್ರೀಮಿಯರ್ ಲೀಗ್​ ಶುರು

ಮುಂಬೈ : ಶನಿವಾರ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಮೊದಲ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಟಿ20 ಕ್ರಿಕೆಟ್​ಗೆ ಹೇಳಿ ಮಾಡಿಸಿದ ವಾಂಖೆಡೆ ಪಿಚ್​ನಲ್ಲಿ ಈ ರೋಚಕ ಕಾದಾಟ ನಡೆಯಲಿದ್ದು ಅಭಿಮಾನಿಗಳಂತು ಕಾದು ಕುಳಿತಿದ್ದಾರೆ.

ಮುಂಬೈನಲ್ಲಿ ಇಂದು ಬೆಳಗ್ಗಿನಿಂದಲೇ ಕ್ರಿಕೆಟ್ ಜಾತ್ರೆ ಶುರುವಾಗಿದೆ. ಇಲ್ಲಿನ ಪ್ರಸಿದ್ಧ ವಾಂಖೆಡೆ ಕ್ರೀಡಾಂಗಣ ಇಂಡಿಯನ್ ಪ್ರೀಮಿಯರ್ ಲೀಗ್ ಐಪಿಎಲ್ 2022ರ ಚೊಚ್ಚಲ ಪಂದ್ಯಕ್ಕೆ ವೇದಿಕೆಯಾಗಲಿದೆ. ಶನಿವಾರ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್  ನಡುವೆ ಮೊದಲ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಟಿ20 ಕ್ರಿಕೆಟ್​ಗೆ ಹೇಳಿ ಮಾಡಿಸಿದ ವಾಂಖೆಡೆ ಪಿಚ್​ನಲ್ಲಿ  ಈ ರೋಚಕ ಕಾದಾಟ ನಡೆಯಲಿದ್ದು ಅಭಿಮಾನಿಗಳಂತು ಕಾದು ಕುಳಿತಿದ್ದಾರೆ. ಈ ಸ್ಟೇಡಿಯಂನಲ್ಲೇ 20 ಲೀಗ್‌ ಪಂದ್ಯಗಳು ನಡೆಯಲಿವೆ. ಬ್ರಬೋರ್ನ್ ಕ್ರೀಡಾಂಗಣ ಕೂಡ ಆತಿಥ್ಯ ವಹಿಸಿದೆ. ಡಿ.ವೈ ಪಾಟಿಲ್‌ ಕ್ರೀಡಾಂಗಣದಲ್ಲಿ 15 ಪಂದ್ಯಗಳು ನಡೆಯಲಿದ್ದು, ಮಹಾರಾಷ್ಟ್ರ ಕ್ರಿಕೆಟ್‌ ಸಂಸ್ಥೆ ಕ್ರೀಡಾಂಗಣ ಎಂಸಿಎಗೆ 15 ಪಂದ್ಯಗಳನ್ನು ನೀಡಲಾಗಿದೆ.

RELATED ARTICLES

Related Articles

TRENDING ARTICLES