Monday, December 23, 2024

ಇಂದು ಬೆಂಗಳೂರಿಗೆ ತಟ್ಟುತ್ತಾ ಟ್ರಾಫಿಕ್​ ಜಾಮ್​ ಬಿಸಿ..?

ಬೆಂಗಳೂರು : ರಾಜ್ಯದಲ್ಲಿ ಧರ್ಮ ದಂಗಲ್​​​  ದಿನಕ್ಕೊಂದು ಸ್ವರೂಪ ಪಡೆಯುತ್ತಿದೆ. ಒಂದ್ಕಡೆ ತಾರಕಕ್ಕೇರಿದ ‘ಧರ್ಮ’ ದಂಗಲ್​, ಮತ್ತೊಂದೆಡೆ ಬೆಲೆ ಏರಿಕೆ ವಿರುದ್ಧ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಬೃಹತ್ ಪ್ರತಿಭಟನೆಗೆ ಮುಂದಾಗಲಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೋರಾಟ ಪ್ರಾರಂಭ ಮಾಡಲಿದ್ದು, ಬೆಂಗಳೂರಿನ ಫ್ರೀಡಂಪಾರ್ಕಿನಲ್ಲಿ ಪ್ರತಿಭಟನೆ ನಡೆಯಲಿದೆ. ಇಂಧನ​ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಕೂಡಲೇ ಬೆಲೆ‌‌ ಇಳಿಕೆ ಮಾಡುವಂತೆ ಒತ್ತಾಯ ಮಾಡಲಿದ್ದಾರೆ.

ಪ್ರತಿಭಟನೆಯ ನೇತೃತ್ವವನ್ನು ಕಾಂಗ್ರೆಸ್​ನ ಪ್ರಮುಖ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​​, ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ, ಬಿಕೆ ಹರಿಪ್ರಸಾದ್‌ ವಹಿಸಲಿದ್ದಾರೆ. ಹಾಗೂ ಸಾವಿರಾರು ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಲಿದ್ದಾರೆ.

ಇನ್ನು ಈ ಪ್ರತಿಭಟನೆಯಿಂದ ಬೆಂಗಳೂರಿನ ಜನರಿಗೆ ತಟ್ಟಲಿದೆ ಟ್ರಾಫಿಕ್​ ಬಿಸಿ ತಟ್ಟಲಿದೆ.

RELATED ARTICLES

Related Articles

TRENDING ARTICLES