ಸಂತೋಷ್ ಪಾಟೀಲ್ ಆತ್ಮಹತ್ಯೆ, ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಠಿಸಿದೆ. ಬಿಜೆಪಿ ಸರ್ಕಾರದ ವಿರುದ್ಧ ಗುತ್ತಿಗೆದಾರರು ಮಾಡುತ್ತಿದ್ದ 40% ಕಮಿಷನ್ ಆರೋಪ ಸತ್ಯವಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಸಚಿವ ಈಶ್ವರಪ್ಪ ವಿರುದ್ಧ ಪ್ರಧಾನಿ ಮೋದಿ ಸೇರಿ ಅನೇಕ ಬಿಜೆಪಿ ನಾಯಕರ ಗಮನಕ್ಕೆ ತಂದಿದ್ರು.. ಆದ್ರೆ ಈಶ್ವರಪ್ಪ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳದೆ ಇದುದರಿಂದ ಸಂತೋಷ್ ಆತ್ಮಹತ್ಯೆಗೆ ಶರಣಾಗಿದ್ದಾರೆ.. ಹಾಗಾಗಿ, ಈಶ್ವರಪ್ಪರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಮತ್ತು ಭ್ರಷ್ಟಾಚಾರ ಪ್ರಕರಣದ ಅಡಿಯಲ್ಲಿ ಬಂಧನ ಮಾಡಬೇಕು ಅಂತ ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.
40% ಕಮಿಷನ್ ಮೂಲಕ ಬಿಜೆಪಿ ಸರ್ಕಾರ ರಾಜ್ಯದ ಮಾನ ಮರ್ಯಾದೆ ಹಾಳು ಮಾಡಿದೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯಿಂದ ರಾಷ್ಟ್ರ ಮಟ್ಟದಲ್ಲಿ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ. ಕಾಂಗ್ರೆಸ್ ರಾಜಕೀಯ ಮಾಡಲು ಈ ಪ್ರಕರಣ ಬಳಸಿಕೊಳ್ಳುತ್ತಿಲ್ಲ. ಪ್ರಧಾನಿ ಮೋದಿ ಇದನ್ನು ಗಮನಿಸಬೇಕು. ಯಾರೆಲ್ಲ ಭ್ರಷ್ಟ ಮಂತ್ರಿಗಳು ಇದ್ದಾರೆ, ಅವರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ರು.
ಇತ್ತ ದೆಹಲಿಯಲ್ಲೂ ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸ್ತು.. ಗೃಹ ಸಚಿವ ಅಮಿತ್ ಶಾ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಯೂತ್ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದ್ರು.
ಶಿವಮೊಗ್ಗದಲ್ಲಿಸಚಿವ ಈಶ್ವರಪ್ಪಗೆ ಮುತ್ತಿಗೆ ಹಾಕಲು ಯುವ ಕಾಂಗ್ರೆಸ್ ಕಾರ್ಯಕರ್ತರು ಮುಂದಾದ್ರೆ, ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿ ಕಾರ್ಯಕರ್ತರು ಪ್ರೊಟೆಸ್ಟ್ ನಡೆಸಿದ್ರು. ಈ ವೇಳೆ ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಭಾರೀ ಹೈಡ್ರಾಮಾವೇ ನಡೀತು. ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಕೆ.ಕೆ.ಗೆಸ್ಟ್‌ಹೌಸ್ ಬಳಿ ಎಎಪಿ ಪ್ರತಿಭಟನೆ ನಡೆಸಿದ್ರೆ.. ಇತ್ತ ದಾವಣಗೆರೆಯಲ್ಲಿ ಈಶ್ವರಪ್ಪ ವಿರುದ್ಧ ಕುತಂತ್ರ ರಾಜಕಾರಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೆ.ಎಸ್.ಈಶ್ವರಪ್ಪ ಅಭಿಮಾನಿ ಬಳಗ ಪ್ರತಿಭಟನೆ ನಡೆಸ್ತು.
ಸಚಿವ ಈಶ್ವರಪ್ಪ ತಲೆ ದಂಡಕ್ಕೆ ಕಾಂಗ್ರೆಸ್ ಪಟ್ಟು ಹಿಡಿದಿದೆ. ಅಲ್ಲದೆ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನವಾಗಬೇಕು ಅಂತ ಆಗ್ರಹಿಸ್ತಿದ್ದಾರೆ. ಈಶ್ವರಪ್ಪ ಮೇಲೆ ಕ್ರಮ ತೆಗೆದುಕೊಳ್ಳುವವರೆಗೂ ಹೋರಾಟ ಮಾಡೋ ಎಚ್ಚರಿಕೆಯನ್ನ ನೀಡಿದೆ. ಆದ್ರೆ, ಕಾಂಗ್ರೆಸ್ ಎಚ್ಚರಿಕೆಯನ್ನು ಬಿಜೆಪಿ ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತೆ ಅನ್ನುವುದು ಕಾದು ನೋಡಬೇಕು.