Wednesday, January 22, 2025

ಸಿಎಂ ಇಬ್ರಾಹಿಂಗೆ ಜೆಡಿಎಸ್​​ ರಾಜ್ಯಾಧ್ಯಕ್ಷ ಸ್ಥಾನ

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಇದೇ 17ರಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ. ಪಕ್ಷದ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಸೇರಲಿದ್ದಾರೆ.

ಕಾಂಗ್ರೆಸ್ ತೊರೆದಿರುವ ಇಬ್ರಾಹಿಂ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಜೆಡಿಎಸ್ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಈಗಾಗಲೇ ಭಾಗವಹಿಸುತ್ತಿದ್ದಾರೆ. ಪಕ್ಷಕ್ಕೆ ಸೇರ್ಪಡೆಯಾಗುವ ಇಬ್ರಾಹಿಂ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡಲು ತೀರ್ಮಾನಿಸಲಾಗಿದೆ.

ಸೇರ್ಪಡೆಯಾಗುವ ಭಾನುವಾರದಂದೇ ಇಬ್ರಾಹಿಂ ರಾಜ್ಯಾಧ್ಯಕ್ಷರಾಗಿ ಅಕಾರ ಸ್ವೀಕರಿಸುವ ಸಾಧ್ಯತೆಗಳಿವೆ. ಹಾಲಿ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ.ಕುಮಾರಸ್ವಾಮಿ ಅವರಿಗೆ ಪಕ್ಷದ ಸಂಸದೀಯ ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಉದ್ದೇಶಿಸಲಾಗಿದೆ. ಹೀಗಾಗಿ ನೂತನ ಪದಾಕಾರಿಗಳ ಅಕಾರ ಸ್ವೀಕಾರವು ಅಂದೇ ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ.

RELATED ARTICLES

Related Articles

TRENDING ARTICLES