Monday, December 23, 2024

ಹೆಚ್ಡಿಕೆ ಟ್ವಿಟ್​ಗೆ ಮಾಜಿ ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು: ನಿಮ್ಮದು ಜಾತ್ಯತೀತತೆಗೆ ಬದ್ಧವಾಗಿರುವ ಪಕ್ಷ ಅಂತ ಹೇಳುತ್ತಲೇ ಬಂದಿದ್ದೀರಿ ಹಾಗಿದ್ದರೆ ಬಿಜೆಪಿ ಜೊತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾಜಿ ಸಿಎಂ ಹೆಚ್ಡಿಕೆ ಟ್ವಿಟ್​ಗೆ ತಿರುಗೇಟು ಕೊಟ್ಟಿದ್ದಾರೆ.

ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿಂದು ಬರೆದುಕೊಂಡಿರುವ ಅವರು, ಚುನಾವಣಾ ಪೂರ್ವ ಇಲ್ಲವೇ, ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲವಾ(?) ಅದನ್ನು ಘೋಷಿಸಲು ಸಿದ್ಧ ಇದ್ದೀರಾ(?) ಎಂದು ಪ್ರಶ್ನೆ ಮಾಡಿದ್ದಾರೆ.

ಅದುವಲ್ಲದೇ, ವಚನಾಭಂಗದ ನಿಮ್ಮ ಇತಿಹಾಸವನ್ನು ನಾಡಿನ ಜನತೆ ಕಂಡಿದ್ದಾರೆ. ಸುಲಭದಲ್ಲಿ ನಿಮ್ಮನ್ನು ನಂಬಲಾರರೂ, ನಂಬಿಕೆ ಹುಟ್ಟಿಸಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ, ನಿಮ್ಮ ತಂದೆ ಮೇಲಾಣೆ ಮಾಡಿ ಘೋಷಿಸಲು ಸಿದ್ಧ ಇದ್ದೀರಾ(?) ಎಂದು ಹೆಚ್ಡಿಕೆಗೆ ಸವಾಲ್​ ಹಾಕಿದ್ದಾರೆ.

ಇನ್ನು ಗೋಮುಖ ವ್ಯಾಘ್ರರೇ ಸುತ್ತ ಕುಣಿದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಜನ ಪ್ರತಿಯೊಬ್ಬರನ್ನೂ ಸಂಶಯದಿಂದ ನೋಡುತ್ತಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಅಸಲಿ ಮುಖವನ್ನು ಜನರ ಮುಂದೆ ತೆರೆದಿಡಬೇಕಿದೆ. ಉಳಿದುದೆಲ್ಲವನ್ನೂ ಪಕ್ಕಕ್ಕಿಟ್ಟು ನನ್ನ ವಿರುದ್ಧದ ವೈಯಕ್ತಿಕ ನಿಂದನೆ ಮಾಡುತ್ತಿದ್ದಾರೆ. ವಿಕೃತ ಮನಸ್ಸಿನ ಹಳಹಳಿಕೆ ಮತ್ತು ಸುಳ್ಳುಗಳ ಅಭಿಯಾನ‌ ಮಾಡುತ್ತಿದ್ದೀರಾ(?) ಸಾರ್ವಜನಿಕ ಜೀವನದಲ್ಲಿರುವ ನಮ್ಮನ್ನು-ನಿಮ್ಮನ್ನು ಜನ ನೋಡಿದ್ದಾರೆ ಅವರೇ ಎಲ್ಲ ತೀರ್ಮಾನ ಮಾಡ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಗೆ ಕುಟುಕಿದ್ದಾರೆ.

RELATED ARTICLES

Related Articles

TRENDING ARTICLES