Monday, December 23, 2024

ಮರುಪರೀಕ್ಷೆಯ ನಿರ್ಧಾರದ ಹಿಂದಿನ‌ ರಹಸ್ಯ ಏನು? : ಸಿದ್ಧರಾಮಯ್ಯ ಟ್ವಿಟ್

ಬೆಂಗಳೂರು : ಪಿಎಸ್‌ಐ ನೇಮಕಾತಿ ಹಗರಣದ ಸೂತ್ರಧಾರಿ ದಿವ್ಯಾ ಹಾಗರಗಿ ಬಂಧನವಾದ ತಕ್ಷಣ ಮರುಪರೀಕ್ಷೆಯ ನಿರ್ಧಾರದ ಹಿಂದಿನ‌ ರಹಸ್ಯ ಏನು? ಆಕೆ ನೀಡಿರುವ ಹೇಳಿಕೆಯಲ್ಲಿ ಅಂತಹ ಸ್ಪೋಟಕ ಸಂಗತಿಗಳೇನಿದೆ? ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಸರಣಿ ಟ್ವಿಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವ ಅವರು, ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸುವ ಮೂಲಕ ನಡೆದಿರುವ ಅಕ್ರಮವನ್ನು ಒಪ್ಪಿಕೊಂಡ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಯಾವ ನೈತಿಕತೆ ಆಧಾರದಲ್ಲಿ ಗೃಹ ಸಚಿವ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯ? ಆರಗ ಜ್ಞಾನೇಂದ್ರ ಅವರೇ ಗೃಹಸಚಿವರಾಗಿದ್ದು ಪಿಎಸ್‌ಐ ನೇಮಕಾತಿ ಮರುಪರೀಕ್ಷೆ ನಡೆದರೆ ಜ್ಞಾನೇಂದ್ರರಂತಹ ಅಸಮರ್ಥ, ಅಪ್ರಾಮಾಣಿಕ, ನಿಷ್ಕ್ರಿಯರೇ ಪಿಎಸ್‌ಐ ಗಳಾಗಿ ನೇಮಕಗೊಂಡರೂ ಆಶ್ಚರ್ಯ ಇಲ್ಲ ಎಂದು ತಿಳಿಸಿದ್ದಾರೆ.

ಭ್ರಷ್ಟರು, ಕೊಲೆಗಡುಕರು, ರೇಪಿಸ್ಟ್‌ಗಳನ್ನು‌ ಸಮರ್ಥಿಸುವುದೇ ತನ್ನ ಕರ್ತವ್ಯ ಎಂದು ಗೃಹ ಸಚಿವರು ತಿಳಿದುಕೊಂಡಂತಿದೆ. ಇಂತಹ ವಿಫಲ, ನಿಷ್ಕ್ರಿಯ ‘ಚೌಕಿದಾರ’ನಿಂದ ಪೊಲೀಸ್ ಇಲಾಖೆಯೇ ಸುರಕ್ಷಿತವಾಗಿ ಇರಲಾರದು ಎಂದು ಟ್ವಿಟ್​​​ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

RELATED ARTICLES

Related Articles

TRENDING ARTICLES