Monday, December 23, 2024

ದೇಶದಲ್ಲಿ ಮತ್ತೆ ಕೊರೋನಾ ಪ್ರಕರಣ ಹೆಚ್ಚಳ

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 3,805 ಮಂದಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ಸೋಂಕಿನಿಂದ 22 ಮಂದಿ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದವರ ಸಂಖ್ಯೆ 5 ಲಕ್ಷದ 24ಸಾವಿರದ 24ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3,805 ಹೊಸ ಪ್ರಕರಣಗಳು ಮತ್ತು 3,168 ಮಂದಿ ಚೇತರಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳು 20,303 ಇವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

RELATED ARTICLES

Related Articles

TRENDING ARTICLES