Wednesday, January 22, 2025

ಮೋಹಕ ತಾರೆ ರಮ್ಯಾ ಜೊತೆ ಇರುವ ಯುವಕ ಯಾರು ಗೊತ್ತಾ..?

ಬೆಂಗಳೂರು: ಸ್ಯಾಂಡಲ್​ವುಡ್​​ ನಟಿ ಹಾಗೂ ಮಂಡ್ಯದ ಮಾಜಿ ಸಂಸದೆ ರಮ್ಯಾ (ದಿವ್ಯ ಸ್ಪಂದನ) ಅವರು ಹುಡುಗನೊಟ್ಟಿಗಿರುವ ಪೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿದೆ.

ಈ ಪೋಟೋವನ್ನು ಮೋಹಕ ತಾರೆ ರಮ್ಯಾ ಅವರು ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯ ಸ್ಟೋರಿಯಲ್ಲಿ ಪೋಸ್ಟ್​ ಮಾಡಿಕೊಂಡಿದ್ದು, ‘ವೀಕೆಂಡ್ ಪಾರ್ಟಿ’ ಎಂದು ಕ್ಯಾಪ್ಷನ್​ ಕೊಟ್ಟಿದ್ದಾರೆ.

ಸದ್ಯ ರಮ್ಯಾ ಅವರೊಟ್ಟಿಗೆ ಪೋಟೋದಲ್ಲಿರುವ ಹುಡುಗ ಹೆಸರು ಕರಣ್ ಜೋಶಿ. ಈ ಯುವಕನ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಆದರೆ, ಇಬ್ಬರು ಒಟ್ಟಿಗೆ ಇರೋ ಪೋಟೋ ಮಾತ್ರ ಸೋಷಿಯಲ್​ ಮೀಡಿಯಾನಲ್ಲಿ ಬಾರಿ ಸದ್ದು ಮಾಡ್ತಿದೆ.

ಮೋಹಕ ತಾರೆ ರಮ್ಯಾ ಅವರು ರಾಜಕೀಯಕ್ಕೆ ಎಂಟ್ರಿ ಕೊಟ್ಟ ನಂತರ ಚಿತ್ರರಂಗದಿಂದ ದೂರ ಉಳಿದಿದ್ದರು. 2019ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್​​ ಸೋತಿತ್ತು ಆದದನಂತರ ಅವರು ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಆದರೆ, ಈಗ ಅವರು ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್​ ಆಗಿರುವುದರಿಂದ ಚಿತ್ರರಂಗಕ್ಕೆ ಕಂಬ್ಯಾಕ್​ ಮಾಡುವ ಸಾಧ್ಯತೆ ಇದೆ ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.

RELATED ARTICLES

Related Articles

TRENDING ARTICLES