Wednesday, January 22, 2025

‘ಬ್ಯಾಂಕ್‌ನಲ್ಲಿ ಸಾಲ ಪಡೆದ ಘಟಾನುಘಟಿ ರಾಜಕಾರಣಿಗಳು ವಾಪಾಸ್​​ ಕೊಟ್ಟಿಲ್ಲ’

ಬೆಳಗಾವಿ : ಸಹಕಾರ ಕ್ಷೇತ್ರದಲ್ಲಿ ಕೇವಲ ರಮೇಶ ಜಾರಕಿಹೊಳಿ ಮಾತ್ರ ಸಾಲ ಇಲ್ಲ, ಲಕ್ಷ್ಮೀ ಹೆಬ್ಬಾಳ್ಕರ್, ಬಂಡೇಪ್ಪ ಕಾಂಶಪೂರ ಸಹ ಸಾಲ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಬೆಳಗಾವಿಯಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ.

ಇಂದು ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 25 ಕಾರ್ಖಾನೆಯ ಮಾಲೀಕರ ಸಾಲ ಪಡೆದಿದ್ದಾರೆ.
ಕೆಲವರು ಬಡ್ಡಿನೂ ಕಟ್ಟಿಲ್ಲ ಹಾಗೂ ಅಸಲು ಕಟ್ಟಿಲ್ಲ. ಕೆಲವರು ಬಡ್ಡಿಯನ್ನು ನಿಯಮಿತವಾಗಿ ಪಾವತಿಸುತ್ತಿದ್ದಾರೆ. ದಕ್ಷಿಣ ಕನ್ನಡ, ತುಮಕೂರು ಮೊದಲಾದ ಡಿಸಿಸಿ ಬ್ಯಾಂಕ್‌ಗಳಿಂದ ಸಾಲ ಪಡೆದಿದ್ದಾರೆ. ವಸೂಲಿ ಮಾಡಲು ಗಂಭೀರವಾದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾರದು ಎಷ್ಟು ಕೋಟಿ ರೂಪಾಯಿ ಬಾಕಿ ಇದೆ ಎನ್ನುವುದನ್ನು ಕೂಡ ಸಾರ್ವಜನಿಕ ವೇದಿಕೆಯಲ್ಲಿ ಪ್ರಕಟಿಸಲಾಗುವುದು. ಇದರಲ್ಲಿ ರಾಜಕೀಯವೇನಿಲ್ಲ; ಮುಚ್ಚು ಮರೆಯೂ‌ ಇಲ್ಲ ಎಂದು ಪ್ರತಿಕ್ರಿಯಿಸಿದರು.

ದಕ್ಷಿಣ ಕನ್ನಡ, ಶಾಸಕ ರಮೇಶ ಜಾರಕಿಹೊಳಿ ಅವರ ಸೌಭಾಗ್ಯಲಕ್ಷಿ ಸಕ್ಕರೆ ಕಾರ್ಖಾನೆಯಿಂದ ಹಣ ಬಾಕಿ ಇರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಯಾವೆಲ್ಲ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿವೆಯೋ ಅವುಗಳಿಗೆ ಸಂಬಂಧಿಸಿದವರೆಲ್ಲರಿಗೂ ಅದನ್ನು ಮರುಪಾವತಿ ಮಾಡಲು ನೋಟಿಸ್ ಕೊಟ್ಟಿದ್ದಾರೆ ಎಂದು ಹೇಳಿದರು.

ಸಾಲ ಕೊಟ್ಟಿದ್ದು, ಅದನ್ನು ಮರುಪಾವತಿ ಮಾಡಲು ನೋಟಿಸ್ ಕೊಟ್ಟಿದ್ದಾರೆ. ರಮೇಶ ಜಾರಕಿಹೊಳಿ ಮಾತ್ರವಲ್ಲ, ಕಾಂಗ್ರೆಸ್‌ನ ಲಕ್ಷ್ಮಿ ಹೆಬ್ಬಾಳಕರ, ಜೆಡಿಎಸ್‌ನ‌‌ ಬಂಡೆಪ್ಪ ಕಾಂಶಪೂರ ಮೊದಲಾದವರು ಕೂಡ ಬಾಕಿ ಉಳಿಸಿಕೊಂಡಿದ್ದಾರೆ. ಸಕ್ಕರೆ ಕಾರ್ಖಾನೆ ಇರುವ 24 ಜನರು ಸಾಲ ಪಡೆದಿದ್ದಾರೆ. ಡಿಸಿಸಿ ಬ್ಯಾಂಕ್‌ನಿಂದ 1200 ಕೋಟಿ ರೂ ಸಾಲ ಕೊಡಲಾಗಿದೆ. ಪಾವತಿಗೆ ಅಪೆಕ್ಸ್ ಬ್ಯಾಂಕ್‌ನಿಂದ ಕ್ರಮ ವಹಿಸಲಾಗಿದೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES