Sunday, January 19, 2025

ಶಿಕ್ಷಕರ ನೇಮಕಾತಿ ಪರೀಕ್ಷೆ ಮೇಲೆ ಹದ್ದಿನ ಕಣ್ಣು..!

ಬೆಂಗಳೂರು: ಪಿಎಸ್‌ಐ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆ ಪರೀಕ್ಷೆ ಅಕ್ರಮದಿಂದ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ ೧೫ ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ವಿಚಾರದಲ್ಲಿ ಫುಲ್ ಅಲರ್ಟ್ ಆಗಿದೆ. ಮುಂದಿನ ವಾರ ಪ್ರಾಥಮಿಕ ಶಾಲಾ ಶಿಕ್ಷಕರ ಪರೀಕ್ಷೆ ನಡೆಯಲ್ಲಿದ್ದು, ಶಿಕ್ಷಣ ಇಲಾಖೆ ಪ್ರಶ್ನೆ ಪತ್ರೀಕೆ ಗೌಪ್ಯತೆಗೆ ತೀರಾ ತಲೆಕೆಡಿಸಿಕೊಂಡಿದೆ. ಜೊತೆಗೆ ಎರಡು ದಿನಗಳ ಕಾಲ ನಡೆಯುವ ಈ ಪರೀಕ್ಷೆಗೆ ಕಟ್ಟುನಿಟ್ಟಿನ ಕ್ರಮ ತಗೆದುಕೊಳ್ಳಲು ಮುಂದಾಗಿದೆ.

ಅದುವಲ್ಲದೇ,15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಮೇ 21 ಮತ್ತು 22ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯುತ್ತಿದೆ. ಈ ಪರೀಕ್ಷೆಗೆ 1 ಲಕ್ಷದ 6 ಸಾವಿರ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಈ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ಇಂದು‌ ಶಿಕ್ಷಣ ಸಚಿವರು ಗೃಹ ಇಲಾಖೆ ಜೊತೆ ಸಭೆ ನಡೆಸಿದ್ರು. ಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆಗೆ ಬೇಕಾದ ಅಗತ್ಯ ಕ್ರಮ ಕೈಗೊಳ್ಳಲು ಗೃಹ ಇಲಾಖೆಗೆ ಮನವಿ ಮಾಡಿದ್ರು. ಇದ್ರ ಜೊತೆಗೆ ಪರೀಕ್ಷಾ ನಿಯಮವನ್ನೂ ಇನ್ನಷ್ಟು ಬಿಗಿ ಮಾಡಿ ಶಿಕ್ಷಣ ಸಚಿವರು ಆದೇಶ ಹೊರಡಿಸಿದ್ದಾರೆ.

ಇನ್ನು ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ವೇಳೆ ಅಕ್ರಮ ತಡೆಯಲು ಶಿಕ್ಷಣ ಇಲಾಖೆ ಭಾರಿ ವಿಶೇಷವಾದ ಕೆಲ ನಿಯಮವನ್ನ ಜಾರಿಗೆ ತಂದಿದೆ. ಮುಖ್ಯವಾಗಿ ಈಬಾರಿ ಪರೀಕ್ಷೆಯಲ್ಲಿ ಒಂದು ಕೊಠಡಿಯಲ್ಲಿ 20 ಮಂದಿ ಅಭ್ಯರ್ಥಿಗಳನ್ನ ಮಾತ್ರ ಪರೀಕ್ಷೆ ಕೂರಿಸಲು ತೀರ್ಮಾನಿಸಲಾಗಿದೆ. ಹಾಗೇ ಪರೀಕ್ಷಾ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಿ ಎಲೆಕ್ಟ್ರಾನಿಕ್ ಉಪಕರಣ ಪತ್ತೆಗೆ ಕ್ರಮ ವಹಿಸಲಾಗಿದೆ. ಇನ್ನು ಪ್ರತೀ ಪರೀಕ್ಷಾ ಕೇಂದ್ರಗಳನ್ನ ಪರೀಕ್ಷೆಗೂ ಮೂರು ದಿನ ಮುಂಚಿತವಾಗೇ ವಶಕ್ಕೆ ಪಡೆಯಲಾಗುತ್ತೆ. ಹಾಗೇ ಈ ಪರೀಕ್ಷಾ ಮೇಲ್ವಿಚಾರಣೆಗಾಗಿ 3 ಕಮಿಟಿ ರಚಿಸಲಾಗ್ತಿದ್ದು ಈ ಕಮಿಟಿ ಪರೀಕ್ಷೆ ಮೇಲೆ ಸಂಪೂರ್ಣ ನಿಗಾ ವಹಿಸಲಿದೆ. ಇನ್ನು ಪರೀಕ್ಷೆಗೆ ಮೊಬೈಲ್, ವಾಚ್, ಬ್ಲೂಟೂತ್ ಬಳಕೆಯನ್ನ ಸಂಪೂರ್ಣ ನಿಷೇಧ ಮಾಡಲಾಗಿದ್ದು ಪರೀಕ್ಷೆ ಆರಂಭಕ್ಕೂ ಮುನ್ನ ಪ್ರತೀ ಪರೀಕ್ಷಾ ಕೊಠಡಿಗಳ ತಪಾಸಣೆಗೂ ನಿರ್ಧರಿಸಲಾಗಿದೆ.

ಅದೇನೋ ಹೇಳ್ತಾರಲ್ಲ ಅಡಿಕೆಗೆ ಹೋದ ಮಾನ ಆನೆ ಕೊಟ್ರೂ ಬಾರದು ಅಂತ. ಆದ್ರೆ ಪಿಎಸ್ಐ ಪರೀಕ್ಷೆಯಲ್ಲಿ ಹೋದ ಮಾನವನ್ನ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಉಳಿಸಿಕೊಳ್ಳೋಕೆ ಶಿಕ್ಷಣ ಇಲಾಖೆ ಹೊರಟಿದೆ. ಇದಾದ್ರೂ ಸುಸೂತ್ರವಾಗಿ ನಡೆಯುತ್ತಾ ಅನ್ನೋದು ಈಗ ಪ್ರಶ್ನೆಯಾಗಿದೆ.

RELATED ARTICLES

Related Articles

TRENDING ARTICLES