Wednesday, January 22, 2025

ಶಿವಮೊಗ್ಗದಲ್ಲಿ ಡ್ರಗ್ಸ್​ ಹಾವಳಿ : ತಡೆಗಟ್ಟಲು ಬಿಜೆಪಿ ನಾಯಕನ ಒತ್ತಾಯ

ಶಿವಮೊಗ್ಗ : ಗಾಂಜಾ, ಡ್ರಗ್ಸ್ ಹಾವಳಿ ಹೆಚ್ಚಾಗುತ್ತಿದ್ದು, ಮತ್ತು ಕಿಡಿಗೇಡಿಗಳು ಹೊರವಲಯದಲ್ಲಿ ರಾತ್ರಿ ವೇಳೆ ವಾಹನಗಳನ್ನು ಅಡ್ಡಗಟ್ಟಿ ಸವಾರರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕುತ್ತಿರುವುದನ್ನು ಪೊಲೀಸ್ ಇಲಾಖೆ ಕೂಡಲೇ ನಿಯಂತ್ರಿಸಿ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಿಬೇಕೆಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಹರಿಕೃಷ್ಣ ಒತ್ತಾಯಿಸಿದ್ದಾರೆ.

ಇಂದು ಪತ್ರಿಕಾಗೋಷ್ಠಿ ನಡೆಸಿ, ಈ ಬಗ್ಗೆ ಮಾತನಾಡಿದ ಅವರು, ಪ್ರಶಾಂತವಾಗಿದ್ದ ಶಿವಮೊಗ್ಗ ನಗರದಲ್ಲಿ ಸಾರ್ವಜನಿಕರಲ್ಲಿ ಅಶಾಂತಿ ಮೂಡಿಸಿ ಭಯದ ವಾತಾವರಣ ಸೃಷ್ಠಿಸುತ್ತಿರುವವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. ಜಿಲ್ಲೆಯ ಅಭಿವೃದ್ಧಿ ನಡುವೆ, ಸಮಾಜದಲ್ಲಿ ಭಯಭೀತಿ ಉಂಟು ಮಾಡುವ ಘಟನೆಗಳು ನಡೆಯುತ್ತಿವೆ. ಹರ್ಷ ಕೊಲೆ, ಸೂಳೆಬೈಲ್ ಹಾಗೂ ಇನ್ನಿತರ ಕಡೆ ಹಲ್ಲೆಗಳು ಹೆಚ್ಚಾಗುತ್ತಿದ್ದು, ಕಳೆದ 6 ತಿಂಗಳಿಂದ ಕಾರಣವಿಲ್ಲದೇ ಹಾಗೂ ವೈಯಕ್ತಿಕ ದ್ವೇಷವಿಲ್ಲದೇ ಇಂತಹ ಘಟನೆಗಳು ನಡೆಯುತ್ತಿವೆ.

ಅದುವಲ್ಲದೇ, ಪೊಲೀಸರು ಇತ್ತೀಚೆಗೆ ಹಲವರನ್ನು ಬಂಧಿಸಿ ಪ್ರಕರಣ ದಾಖಲಿಸಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ಆದರೆ, ಡ್ರಗ್ಸ್ ಪ್ರಕರಣಗಳಲ್ಲಿ ಡೋಪಿಂಗ್ ಟೆಸ್ಟ್ ಅನ್ನು ಕಡ್ಡಾಯ ಮಾಡಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹರಿಕೃಷ್ಣ ಆಗ್ರಹಿಸಿದ್ದಾರೆ. ಮುಸ್ಲಿಂ ಸಮುದಾಯದವರು ಹೆಚ್ಚಾಗಿ ವಾಸಿಸುತ್ತಿರುವ ಬಡಾವಣೆಗಳಲ್ಲೇ ಇಂತಹ ಘಟನೆಗಳು ನಡೆಯುತ್ತಿದ್ದು, ಅಲ್ಲಿ ಹೆಚ್ಚಿನ ಭದ್ರತೆ ಒದಗಿಸಬೇಕು ಸಮಾಜಘಾತುಕ ಶಕ್ತಿಗಳಿಗೆ ಕಡಿವಾಣ ಹಾಕಬೇಕು. ಇದಕ್ಕಾಗಿ ವಿಶೇಷ ತಂಡ ರಚಿಸಿ ಹತೋಟಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ.

RELATED ARTICLES

Related Articles

TRENDING ARTICLES