Monday, December 23, 2024

PSI ಅಕ್ರಮ : ನಾಗಮಂಗಲ ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷನ ಬಂಧನ

ಮಂಡ್ಯ: 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮದಲ್ಲಿ ಮಂಡ್ಯದ ನಾಗಮಂಗಲ ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷನನ್ನು ಬಂಧಿಸಲಾಗಿದೆ.

ಸಿಐಡಿ ಅಧಿಕಾರಿಗಳು ವಿಚಾರಣೆಯಲ್ಲಿ ಬಗೆದಷ್ಟು ಬಯಲಾಗುತ್ತಿದೆ PSI ಅಕ್ರಮದ ಹಗರಣ. ಇನ್ನು ಈ ಅಕ್ರಮಕ್ಕೆ ಸಂಬಂಧಿಸಿದಂತೆ ಮಂಡ್ಯದ ಮಾಜಿ ಸಚಿವರ ಆಪ್ತನಾದ ಶರತ್ ರಾಮಣ್ಣ ಅವರನ್ನು ಬಂಧಿಸಲಾಗಿದೆ.

ವಿಚಾರಣೆಯಲ್ಲಿ ಕಲಬುರಗಿ ಜೊತೆ ಬೇರೆ ಬೇರೆ ಜಿಲ್ಲೆಗಳಲ್ಲೂ ಅಕ್ರಮ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಶ್ರವಣಬೆಳಗೋಳ ಪಿಎಸ್‌ಐ ಪರವಾಗಿ ಅಕ್ರಮವೆಸಗಿರುವ ಆರೋಪದಡಿ ಶರತ್ ರಾಮಣ್ಣ ಎಂಬಾತನನ್ನು ಸಿಐಡಿ ಪೊಲೀಸರು ಅರೆಸ್ಟ್ ಮಾಡಿದ್ದು,ಇವರು ಮಂಡ್ಯ ಜಿಲ್ಲೆಯ ನಾಗಮಂಗಲದವನಾಗಿದ್ದಾರೆ.

ಈತ ಮಾಜಿ ಯೂತ್ ಕಾಂಗ್ರೆಸ್ ಅಧ್ಯಕ್ಷ, ಮತ್ತು ಮಾಜಿ ಸಚಿವ ಎನ್ ಚಲುವರಾಯಸ್ವಾಮಿ ಅವರ ಆಪ್ತನಾಗಿದ್ದಾರೆ. ಅಲ್ಲದೇ ಹಲವು ಕಾಂಗ್ರೆಸ್ ನಾಯಕರೊಂದಿಗೆ ಶರತ್ ತೆಗೆಸಿಕೊಂಡಿರುವ ಫೋಟೋ ಈಗ ವೈರಲ್ ಆಗ್ತಿದೆ.

RELATED ARTICLES

Related Articles

TRENDING ARTICLES