Monday, February 24, 2025

ಈಜಲು ತೆರಳಿದ್ದ ಇಬ್ಬರು ಮಕ್ಕಳು ನಾಪತ್ತೆ

ಶಿವಮೊಗ್ಗ : ಭದ್ರಾ ನಾಲೆಯಲ್ಲಿ ಈಜಲು ತೆರಳಿದ್ದ ಮಕ್ಕಳು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮ ಬಳಿ ನಡೆದಿದೆ.

ಚಂದನಾ (14) ಹರ್ಷ (10) ನಾಲೆಯಲ್ಲಿ ನಾಪತ್ತೆಯಾದ ಮಕ್ಕಳು. ಇವರು ಮುದುವಾಲ ಗ್ರಾಮದವರಾಗಿದ್ದು, ಶಾಲೆಗೆ ರಜೆ ಇದ್ದ ಕಾರಣ ದೊಡ್ಡಪ್ಪನ ಮನೆಗೆ ಬಂದಿದ್ದರು. ಈ ವೇಳೆ ಅವರ ಜೊತೆ ಈಜಲು ನಾಲೆಗೆ ಒಟ್ಟು ನಾಲ್ವರು ಮಕ್ಕಳು ತೆರಳಿದ್ದರು.

ಇನ್ನು ನಾಲ್ವರು ಮಕ್ಕಳಲ್ಲಿ ಇಬ್ಬರು ಮಕ್ಕಳು ನಾಲೆಯಲ್ಲಿ ನಾಪತ್ತೆಯಾಗಿದ್ದು, ಮಕ್ಕಳ ಹುಡುಕಾಟಕ್ಕೆ ಅಗ್ನಿಶಾಮಕ ಸಿಬ್ಬಂದಿಯಿಂದ ಭದ್ರಾ ನಾಲೆಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಘಟನೆ ಕುರಿತು ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES