Wednesday, January 22, 2025

ಮಹತ್ವ ಪಡೆದುಕೊಂಡ ಸಿಎಂ ಬೊಮ್ಮಾಯಿ – ಬಿಎಸ್​​ವೈ ಭೇಟಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ಯಡಿಯೂರಪ್ಪನವರ ʼಕಾವೇರಿʼ ನಿವಾಸಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ. ಸಚಿವ ಸಂಪುಟ ಪುನಾರಚನೆ ಹಿನ್ನಲೆಯಲ್ಲಿ ಉಭಯತ್ರಯರ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಇತ್ತೀಚೆಗಷ್ಟೇ ನವದೆಹಲಿಯಲ್ಲಿ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದ್ದು, ಯಡಿಯೂರಪ್ಪನವರ ಜೊತೆಗಿನ ಇಂದಿನ ಭೇಟಿಯಲ್ಲಿ ಈ ವಿಷಯವೂ ಚರ್ಚೆಯಾಗಿದೆ ಎನ್ನಲಾಗಿದೆ.

ಬಸವರಾಜ ಬೊಮ್ಮಾಯಿಯವರ ಸಂಪುಟಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಉತ್ತರ ಸಿಗಲಿದೆ.

RELATED ARTICLES

Related Articles

TRENDING ARTICLES