Friday, November 22, 2024

ಉಗ್ರರಿಂದ ಕಾಶ್ಮೀರ ಪಂಡಿತ ರಾಹುಲ್​ ಹತ್ಯೆ

ಕಾಶ್ಮೀರಿ ಪಂಡಿತ ನೌಕರನ ರಾಹುಲ್ ಭಟ್ ಹತ್ಯೆಗೆ ಸಂಬಂಧಿಸಿದ ತನಿಖೆಗಾಗಿ ಜಮ್ಮು ಮತ್ತು ಕಾಶ್ಮೀರ ಆಡಳಿತವು ವಿಶೇಷ ತನಿಖಾ ತಂಡವನ್ನು ರಚಿಸುತ್ತಿರುವುದಾಗಿ ಪ್ರಕಟಿಸಿದೆ. ಈ ಕುರಿತು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಕಚೇರಿ ಹೇಳಿದೆ. ಉಗ್ರರ ನೀಚ ಕೃತ್ಯದ ಕುರಿತು ಎಲ್ಲ ಆಯಾಮಗಳಲ್ಲಿಯೂ ತನಿಖೆ ಕೈಗೊಳ್ಳಲು ವಿಶೇಷ ತನಿಖಾ ತಂಡವನ್ನು ರೂಪಿಸಲು ನಿರ್ಧರಿಸಿರುವುದಾಗಿ ಹಂಚಿಕೊಳ್ಳಲಾಗಿದೆ.

ರಾಹುಲ್ ಭಟ್ ಅವರ ಹೆಂಡತಿಗೆ ಜಮ್ಮುವಿನಲ್ಲಿ ಸರ್ಕಾರಿ ಉದ್ಯೋಗ ನೀಡಲಾಗುತ್ತದೆ ಹಾಗೂ ಕುಟಂಬಕ್ಕೆ ಹಣಕಾಸು ಸಹಕಾರ ಒದಗಿಸಲಾಗುತ್ತದೆ. ಸರ್ಕಾರವು ಅವರ ಮಗಳ ಶಿಕ್ಷಣದ ವೆಚ್ಚವನ್ನು ಭರಿಸಲಿದೆ ಎಂದು ಹೇಳಿದೆ.

ಮಧ್ಯ ಕಾಶ್ಮೀರದ ಬುಡ್ಗಾಂ ಜಿಲ್ಲೆಯ ಚದೂರ ತಹಶೀಲ್ ಕಚೇರಿಯಲ್ಲಿ ಉಗ್ರ ಕಾಶ್ಮೀರಿ ಪಂಡಿತ ಸಮುದಾಯದ ಸರ್ಕಾರಿ ನೌಕರ ರಾಹುಲ್ ಭಟ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದನು. ಅವರು ತಹಶೀಲ್ ಕಚೇರಿಯಲ್ಲಿ ಗುಮಾಸ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೊಠಡಿಯನ್ನು ಏಕಾಏಕಿ ಪ್ರವೇಶಿಸಿದ ಉಗ್ರ ಗುಂಡು ಹಾರಿಸಿದ್ದನು.
ಇತ್ತೀಚೆಗೆ ಕಾಶ್ಮೀರವನ್ನು ನುಸುಳಿದ್ದ ಪಾಕಿಸ್ತಾನ ಮೂಲದ ಇಬ್ಬರು ಎಲ್ಇಟಿ ಸಂಘಟನೆಯ ಇಬ್ಬರು ಉಗ್ರರನ್ನು ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹತ್ಯೆಗೈದಿವೆ.

RELATED ARTICLES

Related Articles

TRENDING ARTICLES