Wednesday, December 25, 2024

ರಾಜ್ಯದಲ್ಲಿ ಮಳೆ ಮುಂದುವರಿಕೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ಅಸಾನಿ ಚಂಡಮಾರುತ ಕ್ಷೀಣವಾಗಿದ್ದರೂ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ.

ಕಳೆದ ಎರಡು ವಾರಗಳಿಂದ ರಾಜ್ಯದ ಒಳನಾಡಿನಲ್ಲಿ ಬೀಳುತ್ತಿರುವ ಮಳೆ ಸದ್ಯಕ್ಕೆ ನಿಲ್ಲುವುದಿಲ್ಲ. ಕಳೆದ ನಾಲ್ಕು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಜಿಟಿಜಿಟಿ ಮಳೆ ಬೀಳುತ್ತಿದ್ದು, ಮೋಡ ಮುಸುಕಿದ ವಾತಾವರಣ ಕಂಡುಬಂದಿದ್ದು, ತಂಪಾದ ಮೇಲ್ಮೈ ಗಾಳಿಯೂ ಬೀಸುತ್ತಿದೆ .ನಾಳೆಯಿಂದ ಮೋಡದ ಪ್ರಮಾಣ ಕಡಿಮೆಯಾಗಲಿದ್ದು, ಬಿಸಿಲಿನ ವಾತಾವರಣ ಕಂಡುಬರಲಿದೆ. ಆದರೂ ಆಗಾಗ್ಗೆ ಕೆಲವೆಡೆ ಹಗುರ ಇಲ್ಲವೆ ಸಾಧಾರಣ ಮಳೆ ಮುಂದುವರಿಯಲಿದೆ.

RELATED ARTICLES

Related Articles

TRENDING ARTICLES