ಬೆಂಗಳೂರು: ತಮಿಳುನಾಡಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಆ್ಯಸಿಡ್ ನಾಗನನ್ನು ಪೊಲೀಸರು ಬಂಧಿಸಿ ಕರೆತರುತ್ತಿದ್ದ ವೇಳೆ ನಾಗೇಶನ ಕಾಲಿಗೆ ಪೊಲೀಸರು ಕೆಂಗೇರಿ ಪ್ಲೈಓವರ್ ಬಳಿ ಗುಂಡು ಹಾರಿಸಿದ್ದಾರೆ.
ಆ್ಯಸಿಡ್ ಪ್ರಕರಣ ದಾಳಿಯಲ್ಲಿ ಆರೋಪಿಯನ್ನು ಬಂಧಿಸಿ ಕರೆ ತರುವ ವೇಳೆ ಮೂತ್ರ ವಿಸರ್ಜನೆಗೆ ವಾಹನ ನಿಲ್ಲಿಸುವಂತೆ ಕೇಳಿದ್ದ ನಾಗೇಶ್, ನೈಸ್ ರಸ್ತೆ ಬಳಿ ವಾಹನ ನಿಲ್ಲಿಸದೇ ಬೆಂಗಳೂರಿನ ಕೆಂಗೇರಿ ಫ್ಲೈ ಓವರ್ ಬಳಿ ಪೊಲೀಸರು ವಾಹನ ನಿಲ್ಲಿಸಿದ್ದಾರೆ. ಈ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ.
ಕಿರಾತಕನನ್ನು ಹಿಡಿಯಲು PC ಮಹದೇವಯ್ಯ ಹೋಗಿದ್ದಾರೆ. ಅವರ ಮೇಲೆ ಕಲ್ಲಿನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಇನ್ನು ಇದೇ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ತಪ್ಪಿಸಿಕೊಳ್ಳದಂತೆ ಪಿಐ ಎಚ್ಚರಿಕೆ ನೀಡಿದ್ದಾರೆ. ಕಾಮಾಕ್ಷಿಪಾಳ್ಯ ಠಾಣೆ ಇನ್ಸ್ಪೆಕ್ಟರ್ ಪ್ರಶಾಂತ್ ಎಚ್ಚರಿಕೆ ನೀಡಿದರೂ ಕೂಡ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆ ಸಮಯದಲ್ಲಿ ನಾಗೇಶ್ ಬಲಗಾಲಿಗೆ ಇನ್ಸ್ಪೆಕ್ಟರ್ ಗುಂಡು ಹಾರಿಸಿದ್ದಾರೆ.
ಗಾಯಾಳುವಿಗೆ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ
ಕೆಂಗೇರಿಯ BGS ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪಶ್ಚಿಮ ವಿಭಾಗದ ಡಿಸಿಪಿ ಡಾ.ಸಂದೀಪ್ ಭೇಟಿ ನೀಡಿದ್ದಾರೆ. ಚೇತರಿಕೆ ಕಂಡ ಮೇಲೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಸೆಂಟ್ ಜಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಗೆ ಅವರು ಪೋಷಕರು ವಿಚಾರವನ್ನು ತಿಳಿಸಿದ್ದಾರೆ. ಆ ವೇಳೆ ಕಾಲಿಗೆ ಗುಂಡು ಹೊಡೆಯೋ ಬದಲು, ಎನ್ ಕೌಂಟರ್ ಮಾಡಬೇಕಾಗಿತ್ತು ಎಂದು ಪೋಷಕರ ಬಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.